ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ ಮಕ್ಕಳು ಸೇರಿ ಕನಿಷ್ಠ 20 ಮಂದಿ ಸಾವು

ಪರಿಸ್ಥಿತಿ ಅತ್ಯಂತ "ಆತಂಕಕಾರಿ"ಯಾಗಿದೆ. ಈಗ ಸಾವಿನ ಸಂಖ್ಯೆ 20ಕ್ಕೆ ಏರಿದ್ದು, ಅದು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
At least 20, including children killed as heavy rain triggers landslides in West Bengal’s Darjeeling
ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಭಾನುವಾರ ನಿರಂತರ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 20 ಜನ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಪ್ರವಾಹದಲ್ಲಿ ಮನೆಗಳು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಗ್ರಾಮಗಳು ಪ್ರತ್ಯೇಕಗೊಂಡಿವೆ ಮತ್ತು ನೂರಾರು ಪ್ರವಾಸಿಗರು ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ಸಂಗ್ರಹಿಸಿದ ವರದಿಗಳ ಪ್ರಕಾರ, ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ, ಧಾರ್ ಗಾಂವ್ (ಮೇಚಿ), ನಾಗರಕತ ಮತ್ತು ಮಿರಿಕ್ ಸರೋವರ ಪ್ರದೇಶ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಸಾವುನೋವುಗಳು ವರದಿಯಾಗಿವೆ.

At least 20, including children killed as heavy rain triggers landslides in West Bengal’s Darjeeling
West Bengal: ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೀಕರ ಭೂಕುಸಿತದಲ್ಲಿ 14 ಸಾವು, ಸಿಕ್ಕಿಂ ಸಂಪರ್ಕ ಕಡಿತ

ಪರಿಸ್ಥಿತಿ ಅತ್ಯಂತ "ಆತಂಕಕಾರಿ"ಯಾಗಿದೆ. ಈಗ ಸಾವಿನ ಸಂಖ್ಯೆ 20ಕ್ಕೆ ಏರಿದ್ದು, ಅದು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ನಾನು ಆ ಪ್ರದೇಶಕ್ಕೆ ಹೋಗುತ್ತಿದ್ದೇನೆ" ಎಂದು ಉತ್ತರ ಬಂಗಾಳ ಅಭಿವೃದ್ಧಿ ಸಚಿವ ಉದಯನ್ ಗುಹಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್ ಹೇಳಿಕೆಯ ಪ್ರಕಾರ, ಭೂಕುಸಿತದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶವಾದ ಮಿರಿಕ್‌ನಲ್ಲಿ ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡವರನ್ನು ಆ ಪ್ರದೇಶದಿಂದ ರಕ್ಷಿಸಲಾಗಿದೆ.

ಡಾರ್ಜಿಲಿಂಗ್‌ನಲ್ಲಿ ಏಳು ಜನ ಸಾವನ್ನಪ್ಪಿದ್ದು, ಪೊಲೀಸರು, ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅಕ್ಟೋಬರ್ 7 ರವರೆಗೆ ಈ ಪ್ರದೇಶದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ಉತ್ತರ ಬಂಗಾಳದಲ್ಲಿ ದಿಢೀರ್ ಪ್ರವಾಹಕ್ಕೆ ಕಾರಣವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com