ಮತ್ತೊಂದು ಪೈಶಾಚಿಕ ಕೃತ್ಯ: MBBS ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, Video ರೆಕಾರ್ಡ್!

ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಆಕೆಯ 20 ವರ್ಷದ ಸ್ನೇಹಿತನೇ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ.
MBBS Student Alleges Friend Drugged, Raped Her
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ವರದಿಯಾಗಿದ್ದು, ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ವೆಸಗಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ನಡೆದಿದೆ.

ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಆಕೆಯ 20 ವರ್ಷದ ಸ್ನೇಹಿತನೇ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆ ಸೆಪ್ಟೆಂಬರ್ 9 ರಂದು ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ಈಗಾಗಲೇ ಸಂತ್ರಸ್ಥ ಯುವತಿ ಪೊಲೀಸ್ ದೂರು ನೀಡಿದ್ದಾರೆ. ಯುವತಿ ತನ್ನ ದೂರಿನಲ್ಲಿ, ಆರೋಪಿ - ಸಹ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಸ್ನೇಹದ ನೆಪದಲ್ಲಿ ಹೊಟೆಲ್ ಗೆ ಕರೆದೊಯ್ದು, ಅಲ್ಲಿ ನನಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರವೆಸಗಿದ್ದಾನೆ.

ಅಲ್ಲದೆ ತನ್ನ ದುಷ್ಕೃತ್ಯವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಫೋಟೋಗಳನ್ನು ಕೂಡ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದಾರೆ.

MBBS Student Alleges Friend Drugged, Raped Her
Couple Romance: ರೈಲಿನಲ್ಲಿ ಜನರ ಎದುರೇ ಒಬ್ಬರಿಗೊಬ್ಬರು ತಬ್ಬಿಕೊಂಡು ಚುಂಬಿಸಿದ ಜೋಡಿ; ಮುಜುಗರಕ್ಕೀಡಾದ ಪ್ರಯಾಣಿಕರು; Video

ಬೆದರಿಕೆ

ಅಲ್ಲದೆ ದುಷ್ಕರ್ಮಿ ತನ್ನ ಕೃತ್ಯವನ್ನು ಬಹಿರಂಗ ಪಡಿಸಿದರೆ ಅಥವಾ ದೂರು ನೀಡಿದರೆ, ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ಥೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ಥ ಮಹಿಳೆ ಹರಿಯಾಣದ ಜಿಂದ್ ನಿವಾಸಿಯಾಗಿದ್ದು, ದೆಹಲಿಯ ರೋಹಿಣಿಯಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com