ಜೈಪುರ: ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಆರು ರೋಗಿಗಳು ಸಾವು

ಮಾಹಿತಿ ತಿಳಿದ ಸ್ವಲ್ಪ ಹೊತ್ತಿನಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸುಮಾರು ಎರಡು ಗಂಟೆಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
Various documents, ICU equipment, blood sample tubes, and other items stored in the area were gutted by the fire.(Photo | ANI)
ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
Updated on

ಜೈಪುರ: ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟೋರೇಜ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಾಗ 11 ರೋಗಿಗಳು ನ್ಯೂರೋ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಟ್ರಾಮಾ ಸೆಂಟರ್ ಉಸ್ತುವಾರಿ ಡಾ. ಅನುರಾಗ್ ಧಾಕಡ್ ಹೇಳಿದ್ದಾರೆ.

ಮೃತರನ್ನು ಪಿಂಟು (ಸಿಕಾರ್‌ನವರು), ದಿಲೀಪ್ (ಜೈಪುರದ ಆಂಧಿಯವರು), ಶ್ರೀನಾಥ್, ರುಕ್ಮಿಣಿ, ಖುರ್ಮಾ (ಎಲ್ಲರೂ ಭರತ್‌ಪುರದವರು) ಮತ್ತು ಬಹದ್ದೂರ್ (ಜೈಪುರದ ಸಂಗನೇರ್‌ನವರು) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಇತರ ಹದಿನಾಲ್ಕು ರೋಗಿಗಳನ್ನು ಬೇರೆ ಐಸಿಯುಗೆ ದಾಖಲಿಸಲಾಗಿದೆ ಮತ್ತು ಎಲ್ಲರನ್ನೂ ಸುರಕ್ಷಿತ ಸ್ಥಳಗಳಿಗೆ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು' ಎಂದು ಡಾ. ಧಾಕಡ್ ಹೇಳಿದರು.

ಬೆಂಕಿಯ ಕೆನ್ನಾಲಿಗೆಗೆ ಆ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ದಾಖಲೆಗಳು, ಐಸಿಯು ಉಪಕರಣಗಳು, ರಕ್ತದ ಮಾದರಿ ಟ್ಯೂಬ್‌ಗಳು ಮತ್ತು ಇತರ ವಸ್ತುಗಳು ಸುಟ್ಟುಹೋಗಿವೆ. ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿ ಸಹಾಯಕರು ರೋಗಿಗಳನ್ನು ಸ್ಥಳಾಂತರಿಸಿದರು. ಮೊದಲಿಗೆ ಕಟ್ಟಡದ ಹೊರಗೆ ಕರೆತರಲಾಯಿತು.

Various documents, ICU equipment, blood sample tubes, and other items stored in the area were gutted by the fire.(Photo | ANI)
ಗುಜರಾತ್: ಭರೂಚ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಚಾಚಿದ ಬೆಂಕಿ ಜ್ವಾಲೆ; Video

ಮಾಹಿತಿ ತಿಳಿದ ಸ್ವಲ್ಪ ಹೊತ್ತಿನಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸುಮಾರು ಎರಡು ಗಂಟೆಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದಾಗ, ಇಡೀ ವಾರ್ಡ್ ಹೊಗೆಯಿಂದ ಆವೃತವಾಗಿತ್ತು. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದ ಎದುರು ಬದಿಯಲ್ಲಿರುವ ಕಿಟಕಿಯನ್ನು ಒಡೆದು ಬೆಂಕಿಯನ್ನು ನಂದಿಸಬೇಕಾಯಿತು.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೆಧಾಮ್ ಅವರು ಟ್ರಾಮಾ ಕೇಂದ್ರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com