ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ: ನಾಲ್ವರು ಸಾವು, ಆರು ಮಂದಿಗೆ ಗಾಯ

ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
The incident occurred at RKM Powergen Pvt Ltd’s facility in Ucchpinda village, under Dabhra area
ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ ಘಟಕ
Updated on

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಸರ್ವಿಸ್ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ.

ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಮ್ಮ ಶಿಫ್ಟ್ ಮುಗಿಸಿ 10 ಕಾರ್ಮಿಕರು ಲಿಫ್ಟ್ ನಲ್ಲಿ ಇಳಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಎಂದು ಅಂಕಿತಾ ಶರ್ಮಾ ತಿಳಿಸಿದ್ದಾರೆ. ಅಲ್ಲಿದ್ದವರೆಲ್ಲ ಗಾಯಗೊಂಡಿದ್ದು, ಅವರನ್ನು ಹತ್ತಿರದ ರಾಯ್‌ಗಢದ ಜಿಂದಾಲ್ ಫೋರ್ಟಿಸ್ ಆಸ್ಪತ್ರೆಗೆ ಸಾಗಿಸಲಾಯಿತು. ನಾಲ್ವರು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ.

ಉಳಿದ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ. 2,000 ಕೆಜಿ ಲೋಡ್ ಸಾಮರ್ಥ್ಯದ ಲಿಫ್ಟ್, ಕೆಲವೇ ದಿನಗಳ ಹಿಂದೆ, ಸೆಪ್ಟೆಂಬರ್ 29 ರಂದು ನಿರ್ವಹಣೆಗೆ ಒಳಗಾಗಿತ್ತು ಎಂದು ತಿಳಿದುಬಂದಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com