
ಜೈಪುರ: ನಿನ್ನೆ ಮಂಗಳವಾರ ರಾತ್ರಿ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ತನ್ನ ಕೆನ್ನಾಲಿಗೆ ಚಾಚಿಕೊಂಡ ಘಟನೆ ನಡೆದಿದೆ.
ಡಿಕ್ಕಿಯ ಪರಿಣಾಮವಾಗಿ ಗ್ಯಾಸ್ ಸಿಲಿಂಡರ್‌ಗಳು ಸಿಡಿಯಲು ಪ್ರಾರಂಭಿಸಿದಾಗ ಹಲವಾರು ಸ್ಫೋಟಗಳು ಸಂಭವಿಸಿದವು, ಇದು ಹತ್ತಿರದ ವಾಹನಗಳ ಮೇಲೆ ಕೂಡ ಪರಿಣಾಮ ಬೀರಿತು. ಹಲವಾರು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಮತ್ತು ಸ್ಫೋಟಗಳು ಗೋಚರಿಸುತ್ತಿದ್ದವು ಮತ್ತು ಕೇಳಿಸುತ್ತಿದ್ದವು.
ದುಡು ಪ್ರದೇಶದ ಬಳಿ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ತಲುಪಿ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರ ನಿರ್ದೇಶನದ ಮೇರೆಗೆ, ಉಪ ಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಪರಿಸ್ಥಿತಿಯನ್ನು ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದರು. ಟ್ರಕ್‌ಗಳ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದಾರೆ ಎಂದು ಬೈರ್ವಾ ಸುದ್ದಿಗಾರರಿಗೆ ತಿಳಿಸಿದರು. ಪೊಲೀಸರು ಮತ್ತು ಸ್ಥಳೀಯ ಆಡಳಿತ ಅವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ.
ಸಾವಿನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ, ಇದೇ ಹೆದ್ದಾರಿಯಲ್ಲಿ ಜೈಪುರದ ಭಂಕ್ರೋಟಾ ಬಳಿ ಎಲ್‌ಪಿಜಿ ಟ್ಯಾಂಕರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೃಹತ್ ಬೆಂಕಿಯ ಉಂಡೆ ಹೆದ್ದಾರಿಯ ಒಂದು ಭಾಗಕ್ಕೆ ವ್ಯಾಪಿಸಿ 19 ಜನರನ್ನು ಬಲಿ ತೆಗೆದುಕೊಂಡಿತ್ತು.
Advertisement