ಅನಂತ್‌ನಾಗ್‌: ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆ!

ಸಂಪರ್ಕ ಕಳೆದುಕೊಂಡ ಇಬ್ಬರು ಸೈನಿಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
A search operation to track down terrorists, at Kokernag in Anantnag district, Jammu and Kashmir, Wednesday, Oct. 8, 2025.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕರ್ನಾಗ್‌ನಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚುವ ಶೋಧ ಕಾರ್ಯ.PTI Photo
Updated on

ಅನಂತ್‌ನಾಗ್‌: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನ ಕೊಕರ್ನಾಗ್ ಪ್ರದೇಶದ ಅರಣ್ಯಗಳಲ್ಲಿ ಭಯೋತ್ಪಾದಕರ ಪತ್ತೆಗಾಗಿ ನಡೆಯುತ್ತಿದ್ದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆಯಾಗಿದ್ದಾರೆ.

ಸಂಪರ್ಕ ಕಳೆದುಕೊಂಡ ಇಬ್ಬರು ಸೈನಿಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಕೊಕರ್ನಾಗ್‌ನ ಅಹ್ಲಾನ್ ಗಡೋಲ್ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ಅಡಗಿಕೊಂಡಿರುವ ಮಾಹಿತಿಯ ಮೇರೆಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.

A search operation to track down terrorists, at Kokernag in Anantnag district, Jammu and Kashmir, Wednesday, Oct. 8, 2025.
ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ, ಮುಂದುವರೆದ ಕೂಂಬಿಂಗ್ ಕಾರ್ಯಾಚರಣೆ

ಈ ಮಧ್ಯೆ ಎಲೈಟ್ ಪ್ಯಾರಾ ಘಟಕದ ಭಾಗವಾಗಿರುವ ಇಬ್ಬರು ಸೈನಿಕರ ಸಂವಹನ ಮಾರ್ಗಗಳು ಕಡಿತಗೊಂಡಿದ್ದರಿಂದ ಅವರು ಕಾಣೆಯಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಣೆಯಾದ ಸೈನಿಕರನ್ನು ಪತ್ತೆಹಚ್ಚಲು ಹೆಲಿಕಾಪ್ಟರ್‌ಗಳನ್ನು ವೈಮಾನಿಕ ವಿಚಕ್ಷಣಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಗಸ್ಟ್ 2024 ಮತ್ತು ಸೆಪ್ಟೆಂಬರ್ 2023 ರಲ್ಲಿ ಈ ಪ್ರದೇಶವು ಎರಡು ಪ್ರಮುಖ ಎನ್‌ಕೌಂಟರ್‌ಗಳಿಗೆ ಸಾಕ್ಷಿಯಾದ ನಂತರ ಕಾಶ್ಮೀರದಲ್ಲಿ ಅಹ್ಲಾನ್ ಗಡೋಲ್ ಭಯೋತ್ಪಾದನೆಯ ಹೊಸ ತಾಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com