
ದಿಬ್ರುಗಢ: ಮಾಜಿ ಕೇಂದ್ರ ಸಚಿವ ಮತ್ತು ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ರಾಜೇನ್ ಗೋಹೈನ್ ಅವರು ಗುರುವಾರ ಇತರ 17 ಸದಸ್ಯರೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೇನ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಕೇಳಿಕೊಂಡಿದ್ದಾರೆ.
ರಾಜೇನ್ ಅವರೊಂದಿಗೆ ಅಸ್ಸಾಂನ ಹದಿನೇಳು ಇತರ ಬಿಜೆಪಿ ಸದಸ್ಯರು ಸಹ ದಿಲೀಪ್ ಸೈಕಿಯಾ ಅವರಿಗೆ ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಿಟಿಐ ಜೊತೆ ಮಾತನಾಡಿದ ರಾಜೇನ್ ಗೊಹೈನ್, ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ" ಎಂದು ಆರೋಪಿಸಿದ್ದಾರೆ.
ರಾಜೇವ್ ಅವರು 1999 ರಿಂದ 2019 ರವರೆಗೆ ನಾಲ್ಕು ಅವಧಿಗೆ ನಾಗಾಂವ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು 2016 ರಿಂದ 2019 ರವರೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
Advertisement