
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನ್ ಸೂರಾಜ್ ಪಕ್ಷ ಗುರುವಾರ ಬಿಡುಗಡೆ ಮಾಡಿದೆ. ಆದರೆ ಅದರ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ಖಚಿತಪಡಿಸಿಲ್ಲ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಕ್ಷೇತ್ರವಾದ ರಾಘೋಪುರದಿಂದ ಅಕ್ಟೋಬರ್ 11 ರಂದು ಕಿಶೋರ್ ಪ್ರಚಾರ ಆರಂಭಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಶೀಘ್ರದಲ್ಲೇ ಇತರ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಪಟ್ಟಿಯಲ್ಲಿ ಕಿಶೋರ್ ಅವರ ಹೆಸರಿದ್ದರೆ ಖಂಡಿತ ಅವರು ಸ್ಪರ್ಧಿಸುತ್ತಾರೆ. ಇದು ಸ್ಪಷ್ಟವಾಗಿದೆ. ಅವರು ಅಕ್ಟೋಬರ್ 11 ರಂದು ರಾಘೋಪುರದಿಂದ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಾರೆ ಎಂದು ಸಿಂಗ್ ಹೇಳಿದರು.
ಪಕ್ಷ ಪ್ರಕಟಿಸಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಜನಪ್ರಿಯ ಭೋಜ್‌ಪುರಿ ಗಾಯಕ ರಿತೇಶ್ ರಂಜನ್ ಪಾಂಡೆ ಅವರು ಕಾರ್ಗಹಾರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಮತ್ತು ತೃತೀಯ ಲಿಂಗ ಸಮುದಾಯದಿಂದ ಪ್ರಿತ್ತಿ ಕಿನ್ನರ್ ಅವರು ಗೋಪಾಲ್‌ಗಂಜ್‌ನ ಭೋರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
Advertisement