
ಗುಜರಾತ್: ಗುಜರಾತ್ ನ ಬೋಟಾಡ್ ಜಿಲ್ಲೆಯಲ್ಲಿ ಭಾನುವಾರ ರೈತರಿಗಾಗಿ ಎಎಪಿ ಆಯೋಜಿಸಿದ್ದ 'ಮಹಾಪಂಚಾಯತ್' ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಸಂಜೆ ಹದ್ದದ್ ಗ್ರಾಮದಲ್ಲಿ ಜಾಥಾವನ್ನು ಆಯೋಜಿಸಲು ಯಾವುದೇ ಅನುಮತಿ ಪಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
"ಮಹಾಪಂಚಾಯತ್' ನ್ನು ಕಾನೂನುಬಾಹಿರವಾಗಿ ಆಯೋಜಿಸಲಾಗಿದೆ. ಮಾರುಕಟ್ಟೆ ಅಂಗಳಕ್ಕೆ ಹಾನಿ ಮಾಡುವ ಉದ್ದೇಶದಿಂದ ಈ ಜನರು ಗ್ರಾಮದಲ್ಲಿ ಜಮಾಯಿಸಿದ್ದರು. ಪೊಲೀಸ್ ಅಧಿಕಾರಿಗಳು ಸ್ಥಳದಿಂದ ತೆರಳಳು ಕೇಳಿದಾಗ, ಅವರು ಅಧಿಕಾರಿಗಳ ಮೇಲೆ ಕಲ್ಲು ಎಸೆದಿದ್ದಾರೆ. ಇದು ಪೊಲೀಸ್ ವಾಹನಕ್ಕೆ ಹಾನಿಯನ್ನುಂಟುಮಾಡಿದೆ" ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಶರ್ಮಾ ಹೇಳಿದ್ದಾರೆ.
ಗುಂಪನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ ಎಂದು ಅವರು ಹೇಳಿದರು.
"ಮೂವರು ಪೊಲೀಸರು ಗಾಯಗೊಂಡಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 20 ಜನರನ್ನು ಬಂಧಿಸಲಾಗಿದೆ, ಆದರೆ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಸಂಖ್ಯೆ ಹೆಚ್ಚಾಗಬಹುದು" ಎಂದು ಅವರು ಹೇಳಿದರು, ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ.
Advertisement