
ನವದೆಹಲಿ: 1 ವರ್ಷದ ತನ್ನ ಮಗುವನ್ನು ಮಹಿಳೆಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸದರ್ ಕೊತ್ವಾಲಿ ಪ್ರದೇಶದಲ್ಲಿ ವರದಿಯಾಗಿದೆ.
ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖುಷ್ಬೂ ಎಂದು ಗುರುತಿಸಲಾದ ಆರೋಪಿ, ವೈವಾಹಿಕ ಕಲಹದ ನಂತರ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು ಮತ್ತು ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಸುಭಾಷ್ ನಗರದ ಕೋಣೆಯಲ್ಲಿ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗುವನ್ನು ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿ ಕೊಂದಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ" ಎಂದು ಸರ್ಕಲ್ ಆಫೀಸರ್ (ಸದರ್) ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ. ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿ, ಮಗುವಿನ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿವೆ.
ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಖುಷ್ಬೂ ವಿವಾಹಿತಳಾಗಿದ್ದರೂ, ವೈವಾಹಿಕ ಕಲಹದಿಂದಾಗಿ ಸುಭಾಷ್ ನಗರದ ತನ್ನ ತಾಯಿಯ ಮನೆಯಲ್ಲಿ ಹಲವಾರು ತಿಂಗಳುಗಳಿಂದ ವಾಸಿಸುತ್ತಿದ್ದಳು.
Advertisement