
ನವದೆಹಲಿ: ಕೇಂದ್ರ ದೆಹಲಿಯ ಬಾಬಾ ಖಡಕ್ ಸಿಂಗ್ ಮಾರ್ಗದಲ್ಲಿರುವ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಈ ಅಪಾರ್ಟ್‌ಮೆಂಟ್‌ಗಳನ್ನು ಹಲವಾರು ಲೋಕಸಭಾ ಮತ್ತು ರಾಜ್ಯಸಭಾ ಸಂಸದರಿಗೆ ಹಂಚಿಕೆ ಮಾಡಲಾಗಿದೆ.
ಇಂದು ಮಧ್ಯಾಹ್ನ 1.23ಕ್ಕೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 2.10 ರ ಸುಮಾರಿಗೆ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ.
2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಈ ಕಟ್ಟಡವು ಹಲವಾರು ಲೋಕಸಭಾ ಮತ್ತು ರಾಜ್ಯಸಭಾ ಸಂಸದರಿಗೆ ಹಂಚಿಕೆ ಮಾಡಲಾಗಿದೆ.
ಅಪಾರ್ಟ್‌ಮೆಂಟ್‌ನಲ್ಲಿರುವ ಅಗ್ನಿಶಾಮಕ ಹೈಡ್ರಂಟ್ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಟ್ಯಾಂಕ್ ಹಾಗೂ ಪೈಪ್‌ಲೈನ್‌ಗಳಲ್ಲಿ ನೀರಿಲ್ಲ ಎಂದು ಪ್ರತ್ಯಕ್ಷದರ್ಶಿಗಳು NDTV ಗೆ ತಿಳಿಸಿದ್ದಾರೆ.
Advertisement