
ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಅದರ ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಸಂಪರ್ಕಿಸಲು ದೆಹಲಿಗೆ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ (VHP) ಭಾನುವಾರ ಒತ್ತಾಯಿಸಿದೆ.
ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ವಿಎಚ್‌ಪಿಯ ದೆಹಲಿ ಘಟಕ ಪತ್ರ ಬರೆದಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದ್ರಪ್ರಸ್ಥ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೆಹಲಿ ರೈಲು ನಿಲ್ದಾಣವನ್ನು ಇಂದ್ರಪ್ರಸ್ಥ ರೈಲು ನಿಲ್ದಾಣ ಮತ್ತು ಶಹಜಹಾನಾಬಾದ್ ಅಭಿವೃದ್ಧಿ ಮಂಡಳಿಯನ್ನು ಇಂದ್ರಪ್ರಸ್ಥ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿದೆ.
ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದು ಬದಲಾಯಿಸಬೇಕು. ಇದರಿಂದ ರಾಜಧಾನಿಯ ಹೆಸರನ್ನು ಅದರ ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಸಂಯೋಜಿಸಬಹುದು ಎಂದು ವಿಎಚ್‌ಪಿ ದೆಹಲಿ ಪ್ರಾಂತ್ ಕಾರ್ಯದರ್ಶಿ ಸುರೇಂದ್ರ ಕುಮಾರ್ ಗುಪ್ತಾ ಪತ್ರದಲ್ಲಿ ತಿಳಿಸಿದ್ದಾರೆ.
"ಹೆಸರುಗಳು ಕೇವಲ ಬದಲಾವಣೆಗಳಲ್ಲ. ಅವು ರಾಷ್ಟ್ರದ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತವೆ. ದೆಹಲಿ ಎಂದು ಹೇಳಿದಾಗ, ನಾವು ಕೇವಲ 2,000 ವರ್ಷಗಳ ಅವಧಿಯನ್ನು ಮಾತ್ರ ನೋಡುತ್ತೇವೆ. ಆದರೆ ಇಂದ್ರಪ್ರಸ್ಥ ಎಂದು ಹೇಳಿದಾಗ, 5,000 ವರ್ಷಗಳ ವೈಭವದ ಇತಿಹಾಸದೊಂದಿಗೆ ಸಂಪರ್ಕ ಸಾಧಿಸುತ್ತೇವೆ" ಎಂದು ಅವರು ಹೇಳಿದ್ದಾರೆ.
Advertisement