
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆಯಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳುಲಿದ್ದು, ಈ ವೇಳೆ ಅವರು ಶಬರಿಮಲೆ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಸೋಮವಾರ ತಿಳಿಸಿದೆ.
ರಾಷ್ಟ್ರಪತಿಗಳು ಅಕ್ಟೋಬರ್ 21 ರ ಸಂಜೆ ರಾಜ್ಯ ರಾಜಧಾನಿ ತಿರುವನಂತಪುರಂ ತಲುಪಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
"ಅಕ್ಟೋಬರ್ 22 ರಂದು ರಾಷ್ಟ್ರಪತಿಗಳು ಶಬರಿಮಲೆ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಆರತಿ ಮಾಡಲಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗುರುವಾರ ತಿರುವನಂತಪುರದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರ ಪ್ರತಿಮೆಯನ್ನು ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಲಿದ್ದಾರೆ.
ನಂತರ, ವರ್ಕಲಾದ ಶಿವಗಿರಿ ಮಠದಲ್ಲಿ ನಾರಾಯಣ ಗುರುಗಳ ಮಹಾಸಮಾಧಿ ಶತಮಾನೋತ್ಸವ ಉದ್ಘಾಟಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಮುರ್ಮು ಪಲೈನ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿಯೂ ಭಾಗವಹಿಸಲಿದ್ದಾರೆ.
"ಅಕ್ಟೋಬರ್ 24 ರಂದು ರಾಷ್ಟ್ರಪತಿಗಳು ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement