

ಸಮಸ್ತಿಪುರ: ಅಲ್ಪಾವಧಿಗೆ ಆರ್‌ಜೆಡಿ ಜೊತೆ ಕೈಜೋಡಿಸಿದ್ದು "ತಪ್ಪು" ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಸಮಸ್ತಿಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅರು, ರಾಜ್ಯದ ಅಭಿವೃದ್ಧಿಗಾಗಿ ಮೋದಿ ಸರ್ಕಾರವನ್ನು ಶ್ಲಾಘಿಸಿದರು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.
ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿದೇ ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್, ಅವರು ದುರಾಡಳಿತ ಮತ್ತು ಕುಟುಂಬ ಆಡಳಿತವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದರು.
"ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಮತ್ತು ಈಗ ಅವರ ಪುತ್ರರು ಮತ್ತು ಪುತ್ರಿಯರನ್ನು ಅಧಿಕಾರಕ್ಕೆ ತರುವಲ್ಲಿ ನಿರತರಾಗಿದ್ದಾರೆ" ಎಂದು 1997 ರಲ್ಲಿ ರಾಬ್ರಿ ದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ್ದನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.
Advertisement