Kurnool bus fire: 42 ಪ್ರಯಾಣಿಕರಿದ್ದ ಹೈದರಾಬಾದ್-ಬೆಂಗಳೂರು ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡದ್ದು ಹೇಗೆ? ಸಾರಿಗೆ ಸಚಿವ ಹೇಳಿದ್ದೇನು?

ಈ ಘಟನೆ ಬೆಳಗಿನ ಜಾವ 3:30 ರ ಸುಮಾರಿಗೆ 43 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾವೇರಿ ಟ್ರಾವೆಲ್ಸ್ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡಿತು.
Bus completely destroyed
ಸುಟ್ಟು ಕರಕಲಾದ ಬಸ್ಸು
Updated on

ಇಂದು ಶುಕ್ರವಾರ ಬೆಳಗಿನ ಜಾವ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಕರ್ನೂಲ್ ಜಿಲ್ಲೆಯ ಚಿನ್ನ ಟೆಕುರು ಗ್ರಾಮದ ಬಳಿ ಬೈಕ್ ಗೆ ಡಿಕ್ಕಿ ಹೊಡೆದು ಬೆಂಕಿ ಹತ್ತಿ ಉರಿದು ಕನಿಷ್ಠ 21 ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನೂಲ್ ಬಳಿ ಬಸ್ ಬೆಂಕಿ ಅವಘಡ

ಈ ಘಟನೆ ಬೆಳಗಿನ ಜಾವ 3:30 ರ ಸುಮಾರಿಗೆ 43 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾವೇರಿ ಟ್ರಾವೆಲ್ಸ್ ವೋಲ್ವೋ ಬಸ್ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡಿತು. ಬಸ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಗೆ ವೇಗವಾಗಿ ಹರಡಿತು, ಹಲವರು ಒಳಗೆ ಸಿಲುಕಿಕೊಂಡರು.

ಪೊಲೀಸರ ಪ್ರಕಾರ, ಹನ್ನೆರಡು ಪ್ರಯಾಣಿಕರು ಕಿಟಕಿಗಳನ್ನು ತೆರೆದು ತುರ್ತು ನಿರ್ಗಮನ ದ್ವಾರವನ್ನು ಒಡೆದು ಹೊರಬಂದು ಜೀವ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ಹಲವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಅಪಘಾತದ ಸಮಯದಲ್ಲಿ ಆ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ.

ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ? 

ಬಸ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ಬಳಿಕ ಅಲ್ಲೇ ಬಸ್ ನಿಂತಿದ್ದರೆ ಇಷ್ಟೊಂದು ಅನಾಹುತ ಸಂಭವಿಸುತ್ತಿರಲಿಲ್ಲ, ಚಾಲಕ ಬಸ್ ನಿಲ್ಲಿಸದೆ ಮುಂದಕ್ಕೆ ಹೋದ ಪರಿಣಾಮ ಬೈಕ್ ಬಸ್ ಅಡಿಯಲ್ಲಿ ಸಿಲುಕಿತ್ತು. ಬೈಕ್ ನೆಲಕ್ಕೆ ಉಜ್ಜಿದ ಪರಿಣಾಮ ಅದರಿಂದ ಬೆಂಕಿ ಹೊತ್ತಿಕೊಂಡಿತ್ತು. ಅದು ಇಡೀ ಬಸ್ ನ್ನೇ ಆವರಿಸಿತ್ತು. ಬೈಕ್ ಸವಾರ ಕೂಡ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಆ ಸಮಯದಲ್ಲಿ ಎಲ್ಲಾ ಪ್ರಯಾಣಿಕರು ಮಲಗಿದ್ದರು.

ಬಸ್ ಚಾಲಕ ಬದಲಿ ಚಾಕನನ್ನು ಎಬ್ಬಿಸಿ ಪ್ರಯಾಣಿಕರನ್ನು ಬಸ್​ನಿಂದ ಕೆಳಗೆ ಇಳಿಸುವ ಪ್ರಯತ್ನ ಮಾಡಿದ್ದಾರೆ. ವೋಲ್ವೊ ಬಸ್ ಆದ ಕಾರಣ ಹಿಂಭಾಗದಲ್ಲಿ ಬೆಂಕಿ ಕೂಡ ಬೇಗ ಹತ್ತಿತ್ತು. ಕಿಟಕಿಗಳು ಮುಚ್ಚಿದ್ದ ಪರಿಣಾಮ ಕಿಟಕಿಯನ್ನು ಒಡೆದು ಪ್ರಯಾಣಿಕರನ್ನು ಹೊರತರಲಾಯಿತು. ಅಷ್ಟರೊಳಗೆ ಹಲವು ಪ್ರಯಾಣಿಕರು ಉಸಿರುಚೆಲ್ಲಿದ್ದರು.

ಉಲ್ಲಿಂದಕೊಂಡ ಕ್ರಾಸ್ ತಲುಪುತ್ತಿದ್ದಂತೆ, ಬಸ್ ಮುಂಭಾಗದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಬಸ್ ನ ಅಡಿಯಲ್ಲಿ ಸಿಲುಕಿಕೊಂಡು ಬೆಂಕಿ ಹೊತ್ತಿಕೊಂಡಿತು. ಬಸ್ ಚಾಲಕ ಮತ್ತೊಬ್ಬ ಸಹಾಯಕ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟೊತ್ತಿಗೆ ಬಸ್ ಪೂರ್ತಿ ಆವರಿಸಿಕೊಂಡಿತ್ತು.

ಬಸ್ ನಲ್ಲಿ ನಸುಕಿನ ವೇಳೆ ಗಾಢ ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಎಚ್ಚರಿಸಿದಾಗ ಕೆಲವರು ತುರ್ತು ಬಾಗಿಲುಗಳ ಮೂಲಕ ಹೊರಬಂದರು. ಹಲವರಿಗೆ ಹೊರಗೆ ಬರಲು ಸಾಧ್ಯವಾಗಲೇ ಇಲ್ಲ. ಇದ್ದಕ್ಕಿದ್ದಂತೆ ಬೆಂಕಿ ಹರಡಿತು, ಬಾಗಿಲು ಲಾಕ್ ಆಯಿತು, ತಂತಿ ಸುಟ್ಟುಹೋದ ಕಾರಣ ಬಾಗಿಲು ತೆರೆಯಲಿಲ್ಲ. ಬಸ್ ನಿಂದ ಪ್ರಯಾಣಿಕರಿಗೆ ಹೊರಗೆ ಬರಲು ಸಾಧ್ಯವಾಗಲೇ ಸಜೀವ ದಹನವಾದರು.

ಪ್ರತ್ಯಕ್ಷದರ್ಶಿಗಳು ಹೇಳುವುದೇನು?

ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿತು. ಬಸ್‌ನೊಳಗಿನ ದಹನಕಾರಿ ವಸ್ತುಗಳು ಬೆಂಕಿಯನ್ನು ತೀವ್ರಗೊಳಿಸಿದವು ಎಂದು ಡಿಐಜಿ ಕೋಯಾ ಪ್ರವೀಣ್ ಹೇಳಿದ್ದಾರೆ. ಬಸ್ಸಿನ ಇಂಧನ ಟ್ಯಾಂಕ್ ಹಾಗೆಯೇ ಇತ್ತು. ಅಪಾಯ ತಡೆಗಟ್ಟಲು ಅಥವಾ ನಿಯಂತ್ರಿಸಲು ವಾಹನವು ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಹೊಂದಿರಲಿಲ್ಲ ಎಂದರು.

ಇದುವರೆಗೆ 21 ಜನರಲ್ಲಿ 11 ಶವಗಳನ್ನು ಗುರುತಿಸಲಾಗಿದೆ, ಆದರೆ 9 ಜನರನ್ನು ಇನ್ನೂ ಗುರುತಿಸಲಾಗಿಲ್ಲ. ಬೆಂಕಿ ಹೊತ್ತಿಕೊಂಡ ನಂತರ ಬಸ್ ಬಾಗಿಲು ಜಖಂಗೊಂಡಿತು ಹಾಗಾಗಿ ತೆರೆಯಲು ಸಾಧ್ಯವಾಗಲಿಲ್ಲ ಎಂದರು.

ಬೆಂಕಿ ಎಷ್ಟು ಬೇಗನೆ ಹರಡಿತೆಂದರೆ, ಹೆಚ್ಚಿನ ಪ್ರಯಾಣಿಕರು ಏನಾಗುತ್ತಿದೆ ಎಂದು ಅರಿತುಕೊಳ್ಳುವ ಮೊದಲೇ ಬೆಂಕಿಯಲ್ಲಿ ಬೆಂದುಹೋದರು. ಕೆಲವರು ಸುಟ್ಟಗಾಯಗಳೊಂದಿಗೆ ಮೃತಪಟ್ಟಕೆ, ಇನ್ನು ಕೆಲವರು ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ಇದೆ.

ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳನ್ನು ಹೊರತೆಗೆಯಲು ಹೆಣಗಾಡಿದವು. ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ, ಆದರೆ ವಿನಾಶದ ಪ್ರಮಾಣವು ಹೆಚ್ಚಿನ ಸಂಖ್ಯೆಯ ಸಾವುನೋವುಗಳನ್ನು ಸೂಚಿಸುತ್ತದೆ.

Bus completely destroyed
Kurnool Bus Fire: ಆಂಧ್ರ ಪ್ರದೇಶದಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ಬೆಂಕಿ ಅವಘಡ: 21 ಮಂದಿ ಸಜೀವ ದಹನ; Video

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಏನೆಂದರು?

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿ, ಬಾಗೇಪಲ್ಲಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ.ಅಪಘಾತದಲ್ಲಿ ಕನ್ನಡಿಗರು ಇದ್ದಾರಾ ಎಂದು ಪರಿಶೀಲನೆ ಮಾಡಲಾಗುತ್ತಿದೆ. ಛತ್ತೀಸ್​ಗಢದಲ್ಲಿ ಈ ಬಸ್​​ನ ನೋಂದಣಿಯಾಗಿದೆ ಎಂದು ಮಾಹಿತಿ ಸಿಕ್ಕಿದೆ ಎಂದರು.

ದುರಂತದಲ್ಲಿ ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ಕರ್ನೂಲ್ ಬಳಿಯ ಬಾಗೇಪಲ್ಲಿಗೆ ಕಳುಹಿಸಲಾಗಿದೆ ಎಂದರು.

ರಾಜಸ್ಥಾನದಲ್ಲಿ ಭೀಕರ ಬಸ್ ಬೆಂಕಿ ಅವಘಡ ಸಂಭವಿಸಿ, ಮೂವರು ಮಕ್ಕಳು ಸೇರಿದಂತೆ 22 ಜನರು ಕಳೆದ ವಾರ ಮೃತಪಟ್ಟಿದ್ದರು. ಅಕ್ಟೋಬರ್ 14 ರಂದು ಥೈಯಾತ್ ಗ್ರಾಮದ ಬಳಿ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ವಾಹನದ ಹವಾನಿಯಂತ್ರಣ ವ್ಯವಸ್ಥೆಯಲ್ಲಿನ ಶಾರ್ಟ್ ಸರ್ಕ್ಯೂಟ್ ಅನಿಲ ಸೋರಿಕೆಗೆ ಕಾರಣವಾಗಿದ್ದು, ಬೆಂಕಿಗೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com