

ಛತ್ತೀಸ್‌ಗಢ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಕ್ಸಲರು, ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ಮಾಡಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಉಸುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಕಂಕೇರ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕ್ಸಲರ ಗುಂಪೊಂದು ರವಿ ಕಟ್ಟಮ್(25) ಮತ್ತು ತಿರುಪತಿ ಸೋಧಿ(38) ಅವರನ್ನು ಅವರ ಮನೆಗಳಿಂದ ಹೊರಗೆಳೆದು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಸ್ಥಳದಲ್ಲೇ ಹತ್ಯೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ದಾಳಿಯ ನಂತರ ನಕ್ಸಲರು ಸ್ಥಳದಿಂದ ಓಡಿಹೋದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ ನಕ್ಸಲರು ಗ್ರಾಮಸ್ಥರನ್ನು ಗುರಿಯಾಗಿಸಿಕೊಂಡಿದ್ದಾರೆ. ಅಕ್ಟೋಬರ್ 14 ರಂದು, ನಕ್ಸಲರು ಬಿಜೆಪಿ ಕಾರ್ಯಕರ್ತನ ಕತ್ತು ಹಿಸುಕಿ ಕೊಂದಿದ್ದರು.
Advertisement