

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯ ಕುಟುಂಬ ಸದಸ್ಯರೊಂದಿಗೆ ಬುಧವಾರ ದೂರವಾಣಿ ಮೂಲಕ ಮಾತನಾಡಿದ್ದಾರೆ.
ಸುಮಾರು ಏಳು ನಿಮಿಷಗಳ ಕಾಲ ನಡೆದ ದೂರವಾಣಿ ಸಂಭಾಷಣೆಯಲ್ಲಿ, ವೈದ್ಯೆಯ ತಾಯಿ, ತಮ್ಮ ಮಗಳಿಗೆ ಆಗಿರುವ ಗಂಭೀರ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ರಾಹುಲ್ ಗಾಂಧಿಗೆ ಭಾವನಾತ್ಮಕ ಮನವಿ ಮಾಡಿದರು.
ವೈದ್ಯರ ಕುಟುಂಬ ಸದಸ್ಯರು, ವೈದ್ಯೆಯ ಸಾವಿನ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ವಿನಂತಿಸಿದರು.
ವೈದ್ಯೆ ಆತ್ಮಹತ್ಯೆ ಮಾಡಿಕೊಂಡು ಒಂದು ವಾರ ಕಳೆದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವ ಆತಂಕ ಇದೆ ಎಂದು ಅವರು ಹೇಳಿದ್ದಾರೆ.
ಇತರ ಮೂರರಿಂದ ನಾಲ್ಕು ಜನ ತಮ್ಮ ಮಗಳ ಮೇಲೆ ಒತ್ತಡ ಹೇರಿದ್ದಾರೆ. ಆದರೂ ಅವರನ್ನು ಪ್ರಶ್ನಿಸಿಲ್ಲ ಅಥವಾ ಪತ್ತೆಹಚ್ಚಲಾಗಿಲ್ಲ ವೈದ್ಯೆಯ ತಾಯಿ ಆರೋಪಿಸಿದ್ದಾರೆ.
ಬೀಡ್ ಜಿಲ್ಲೆಯ ಕವಡ್ಗಾಂವ್ ಗ್ರಾಮದಲ್ಲಿ ತಮ್ಮನ್ನು ಭೇಟಿ ಮಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರ ಫೋನ್ ಮೂಲಕ ವೈದ್ಯೆಯ ತಾಯಿ ಮತ್ತು ಸಹೋದರರೊಂದಿಗೆ ಮಾತನಾಡಿದ, ರಾಹುಲ್ ಗಾಂಧಿ, ಎಸ್‌ಐಟಿ ರಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಮತ್ತು ನ್ಯಾಯಕ್ಕಾಗಿ ಅವರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಈ ಹಿಂದೆ, ವೈದ್ಯೆಯ ಆತ್ಮಹತ್ಯೆ ಸಂಘಟಿತ ಕೊಲೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು ಮತ್ತು ಇದು ಬಿಜೆಪಿ ನೇತೃತ್ವದ ಸರ್ಕಾರದ ಅಮಾನವೀಯ ಮತ್ತು ಸಂವೇದನಾಶೀಲತೆಯನ್ನು ಬಹಿರಂಗಪಡಿಸುತ್ತದೆ ಎಂದಿದ್ದರು.
ಅಕ್ಟೋಬರ್ 23 ರ ರಾತ್ರಿ ಸತಾರಾ ಜಿಲ್ಲೆಯ ಫಾಲ್ಟನ್ ಪಟ್ಟಣದ ಹೋಟೆಲ್ ಕೋಣೆಯಲ್ಲಿ 28 ವರ್ಷದ ವೈದ್ಯೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
Advertisement