ದೇಶದಲ್ಲಿನ ಕಾನೂನು-ಸುವ್ಯವಸ್ಥೆ ಸಮಸ್ಯೆಗೆ BJP-RSS ಕಾರಣ, ನಿಷೇಧ ಅಗತ್ಯ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ-ಆರ್‌ಎಸ್‌ಎಸ್ ಕಾರಣದಿಂದಾಗಿ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಸೃಷ್ಟಿಸುತ್ತಿರುವ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು.
Mallikarjuna Kharge
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ದೇಶದಲ್ಲಿ "ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ" ಸೃಷ್ಟಿಸುತ್ತಿರುವ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 41ನೇ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಉಕ್ಕಿನ ಮನುಷ್ಯ ಮತ್ತು ಉಕ್ಕಿನ ಮಹಿಳೆ ಇಬ್ಬರೂ ಭಾರತದ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸಿದ್ದಾರೆಂದು ಹೇಳಿದರು.

ಇದು ನನ್ನ ವೈಯಕ್ತಿಕ ಅಭಿಪ್ರಾಯ, ಬಿಜೆಪಿ-ಆರ್‌ಎಸ್‌ಎಸ್ ಕಾರಣದಿಂದಾಗಿ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಸೃಷ್ಟಿಸುತ್ತಿರುವ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಸರ್ದಾರ್ ಪಟೇಲ್ ಅವರನ್ನು ಉಲ್ಲೇಖಿಸಿದ ಪ್ರಧಾನಿ ಮೋದಿಯವರನ್ನು ಟೀಕಿಸಿದ ಖರ್ಗೆ ಅವರು, 1948 ರಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಪಟೇಲ್ ಬರೆದ ಪತ್ರವನ್ನು ಉಲ್ಲೇಖಿಸಿದರು, ಸರ್ದಾರ್ ಪಟೇಲ್ ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ್ದರು. ಇದು ದೇಶದ ಜಾತ್ಯತೀತ ರಚನೆಯ ಹಿತಾಸಕ್ತಿಗಾಗಿ ತೆಗೆದುಕೊಂಡ ಹೆಜ್ಜೆಯಾಗಿತ್ತು ಎಂದು ಹೇಳಿದರು.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಿಂದ ಗಾಂಧಿ, ಗೋಡ್ಸೆ, ಆರ್‌ಎಸ್‌ಎಸ್ ಮತ್ತು 2002 ರ ಗಲಭೆಗಳ ಉಲ್ಲೇಖಗಳನ್ನು ತೆಗೆದುಹಾಕುವ ಮೂಲಕ ಮೋದಿ ಸರ್ಕಾರವು "ಇತಿಹಾಸವನ್ನು ವಿರೂಪಗೊಳಿಸಿದೆ" ಎಂದು ಟೀಕಿಸಿದರು.

Mallikarjuna Kharge
ಕಲಬುರಗಿ: RSS ಮೆರವಣಿಗೆ ಬಗ್ಗೆ ಚರ್ಚಿಸಲು ಕರೆದಿದ್ದ ಶಾಂತಿ ಸಭೆ ಗದ್ದಲ, ಗೊಂದಲದಲ್ಲಿ ಅಂತ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com