

ಹೈದರಾಬಾದ್: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೊಹಮ್ಮದ್ ಅಜರುದ್ದೀನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.
ಅಜರುದ್ದೀನ್ ಅವರ ಸೇರ್ಪಡೆಯೊಂದಿಗೆ, ರೇವಂತ್ ರೆಡ್ಡಿ ಸಂಪುಟದ ಒಟ್ಟು ಬಲ 16ಕ್ಕೆ ಏರಿದ್ದು, ಇನ್ನೂ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಅವಕಾಶವಿದೆ. ವಿಧಾನಸಭೆಯ ಬಲದ ಪ್ರಕಾರ, ತೆಲಂಗಾಣ 18 ಸಚಿವರನ್ನು ಹೊಂದಬಹುದು.
ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರನ್ನು ಹೊಂದಿರುವ ಜುಬಿಲಿ ಹಿಲ್ಸ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತೀವ್ರ ಹೋರಾಟ ನಡೆಸುತ್ತಿರುವುದರಿಂದ ಮಾಜಿ ಕ್ರಿಕೆಟಿಗನಿಗೆ ಸಚಿವ ಸ್ಥಾನ ನೀಡಿರುವುದು ನಿರ್ಣಾಯಕ ಹೆಜ್ಜೆಯಾಗಿದೆ.
Advertisement