

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಶುಕ್ರವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಂದು ಕೋಟಿ ಯುವಕರಿಗೆ ಉದ್ಯೋಗ, ಒಂದು ಕೋಟಿ ಲಕ್ಷಪತಿ ದೀದಿ, ನಾಲ್ಕು ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳು ಮತ್ತು ರಾಜ್ಯದಲ್ಲಿ ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಭರವಸೆ ನೀಡಿದೆ.
ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ಎನ್‌ಡಿಎ ಅಧಿಕಾರಕ್ಕೆ ಬಂದರೆ, ವಿಶ್ವ ದರ್ಜೆಯ ವೈದ್ಯಕೀಯ ಕೇಂದ್ರ, ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಉಚಿತ ಪಡಿತರ, 5 ಲಕ್ಷ ರೂ. ಮೌಲ್ಯದ ಉಚಿತ ಚಿಕಿತ್ಸೆ ಮತ್ತು 50 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಸ್ಥಾಪಿಸುವುದಾಗಿ 69 ಪುಟಗಳ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಝಿ, ಚಿರಾಗ್ ಪಾಸ್ವಾನ್ ಮತ್ತು ಮೈತ್ರಿಕೂಟದ ಇತರ ಪಕ್ಷಗಳ ನಾಯಕರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.
Advertisement