

ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಇಂದು. ಅದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ಗುಜರಾತ್‌ನ ನರ್ಮದಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
2014 ರಿಂದ ಅಕ್ಟೋಬರ್ 31ನ್ನು ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ಎಂದು ಆಚರಿಸಿಕೊಂಡು ಬರಲಾಗುತ್ತಿದ್ದು, "ಭಾರತದ ಉಕ್ಕಿನ ಮನುಷ್ಯ" ಎಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪರಂಪರೆಯನ್ನು ಆಚರಿಸುತ್ತದೆ.
ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರ ಬಳಿ ಇರುವ 182 ಮೀಟರ್ ಎತ್ತರದ ಪಟೇಲ್ ಪ್ರತಿಮೆ ಬಳಿ ಮೋದಿ ಬೆಳಿಗ್ಗೆ ಆಗಮಿಸಿ, ಭಾರತದ ಉಕ್ಕಿನ ಮನುಷ್ಯನಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಲು ಮತ್ತು ರಾಷ್ಟ್ರೀಯ ಏಕತಾ ದಿನದ ಮೆರವಣಿಗೆಯಲ್ಲಿ ಭಾಗವಹಿಸಲು ಪ್ರಧಾನಿ ತೆರಳಿದರು.
ಈ ವರ್ಷದ ಆಚರಣೆಗಳು ಸಾಂಸ್ಕೃತಿಕ ಉತ್ಸವ ಮತ್ತು ಬಿಎಸ್‌ಎಫ್, ಸಿಆರ್‌ಪಿಎಫ್ ಮತ್ತು ವಿವಿಧ ರಾಜ್ಯ ಪೊಲೀಸ್ ಪಡೆಗಳ ತುಕಡಿಗಳ ಶಕ್ತಿ ಪ್ರದರ್ಶಿಸುವ ಭವ್ಯ ಮೆರವಣಿಗೆಯನ್ನು ಒಳಗೊಂಡಿವೆ. ಈ ವರ್ಷ, ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗುತ್ತಿರುವುದರಿಂದ ಈ ಕಾರ್ಯಕ್ರಮವು ಇನ್ನಷ್ಟು ವಿಶೇಷವಾಗಿದೆ.
Advertisement