Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
C P Radhakrishnan
ಸಿ ಪಿ ರಾಧಾಕೃಷ್ಣನ್
Updated on

ನವದೆಹಲಿ: ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪ ರಾಷ್ಟ್ರಪತಿಯಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ.

ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿಅವರು 300 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಪರಾಭವಗೊಂಡರು.

ಫಲಿತಾಂಶಗಳನ್ನು ಪ್ರಕಟಿಸಿದ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು, ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ನ್ಯಾಯಮೂರ್ತಿ(ನಿವೃತ್ತ) ಸುದರ್ಶನ್ ರೆಡ್ಡಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದರು.

C P Radhakrishnan
Vice President Election 2025: ಮತದಾನ ಪ್ರಕ್ರಿಯೆ ಆರಂಭ; ಪ್ರಧಾನಿ ಮೋದಿ, ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ

ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಮತ್ತು ಎರಡು ಬಾರಿ ಲೋಕಸಭಾ ಸಂಸದರಾಗಿದ್ದ ರಾಧಾಕೃಷ್ಣನ್ ಅವರು ಈಗ ದೇಶದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿರುತ್ತಾರೆ.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು.

ಅಕ್ಟೋಬರ್ 20, 1957 ರಂದು ತಮಿಳುನಾಡಿನ ಕೊಂಗು ಪ್ರದೇಶದ ತಿರುಪ್ಪೂರಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು, 17ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಸೇರಿದರು. ನಂತರ ಅವರು ಭಾರತೀಯ ಜನತಾ ಪಕ್ಷ(ಬಿಜೆಪಿ) ಕಾರ್ಯಕರ್ತರಾಗಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ, ಎರಡು ಬಾರಿ ಸಂಸದರಾಗಿ, ಆನಂತರ ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com