Nepal Protest
ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ

ನೇಪಾಳ ಜೈಲುಗಳಿಂದ ತಪ್ಪಿಸಿಕೊಂಡು ಬಂದ 35 ಕೈದಿಗಳನ್ನು ಬಂಧಿಸಿದ ಭಾರತ

22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ.
Published on

ನವದೆಹಲಿ: ನೇಪಾಳದಲ್ಲಿ ಇತ್ತೀಚೆಗೆ ನಡೆದ ಯುವಜನರ ಭಾರೀ ಪ್ರತಿಭಟನೆಯಿಂದಾಗಿ ವಿವಿಧ ಜೈಲುಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಭಾರತ ಪ್ರವೇಶಿಸಿದ 35 ಕೈದಿಗಳನ್ನು ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ದೃಢಪಡಿಸಿದ್ದಾರೆ.

22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ. ಈ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು, ಈ ಕೈದಿಗಳನ್ನು ಭಾರತ-ನೇಪಾಳ ಗಡಿಯಾದ್ಯಂತ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಇರಿಸಿದ್ದಾರೆ ಎಂದು ಎಎನ್‌ಐಗೆ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಎಲ್ಲಾ ಗಡಿ ಪ್ರವೇಶ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಮುಂದುವರಿದಿರುವುದರಿಂದ ಬಂಧಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Nepal Protest
ನೇಪಾಳ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ?

ನೇಪಾಳದಲ್ಲಿ ಜೈಲಿನಲ್ಲಿದ್ದ ಕೈದಿಗಳು ಸಾಮೂಹಿಕವಾಗಿ ಹೊರಬಂದ ವರದಿಗಳ ನಂತರ ಎಸ್‌ಎಸ್‌ಬಿ ತೀವ್ರ ಕಟ್ಟೆಚ್ಚರ ವಹಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಸ್‌ಎಸ್‌ಬಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂಗೆ ಹೊಂದಿಕೊಂಡಂತೆ 1,751 ಕಿ.ಮೀ ಉದ್ದದ ಭಾರತ-ನೇಪಾಳ ಗಡಿಯನ್ನು ಸುರಕ್ಷಿತವಾಗಿರಿಸುವ ಜವಾಬ್ದಾರಿಯನ್ನು ಹೊಂದಿದೆ.

ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ್ದನ್ನೇ ನೆಪ ಮಾಡಿಕೊಂಡು, ಅಲ್ಲಿನ ಸರ್ಕಾರದ ವಿರುದ್ಧ ತಮ್ಮೊಳಗಿದ್ದ ಆಕ್ರೋಶಗಳೆಲ್ಲವನ್ನೂ ಒಮ್ಮೆಲೇ ಕಕ್ಕಿದ ಯುವಜನ, ಅಲ್ಲಿನ ಸರ್ಕಾರವನ್ನೇ ಕೆಡವಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com