ಮಿಜೋರಾಂನ ಮೊದಲ ರೈಲು ಮಾರ್ಗ ಪ್ರಧಾನಿ ಮೋದಿ ಉದ್ಘಾಟನೆ: ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ

ಈ ಮಾರ್ಗದಲ್ಲಿ 45 ಸುರಂಗಗಳು, 55 ಪ್ರಮುಖ ಸೇತುವೆಗಳು ಮತ್ತು 87 ಸಣ್ಣ ಸೇತುವೆಗಳು ಸೇರಿವೆ. ಸೈರಾಂಗ್ ಬಳಿಯಿರುವ ಸೇತುವೆ ಸಂಖ್ಯೆ 144, ಕುತುಬ್ ಮಿನಾರ್‌ಗಿಂತ 114 ಮೀಟರ್ ಎತ್ತರವಾಗಿದೆ.
Prime Minister Narendra Modi during laying of foundation stone and inauguration of development works
ಪ್ರಧಾನಿ ನರೇಂದ್ರ ಮೋದಿ ಅವರು ಐಜ್ವಾಲ್‌ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.
Updated on

ಐಜ್ವಾಲ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಮಿಜೋರಾಂನ ಮೊದಲ ರೈಲು ಮಾರ್ಗವನ್ನು ಉದ್ಘಾಟಿಸಿದರು. ಐಜ್ವಾಲ್ ನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದರು.

ಭಾರತೀಯ ರೈಲ್ವೆ ಇತಿಹಾಸದಲ್ಲಿ ಅತ್ಯಂತ ಸವಾಲಿನ ಮಾರ್ಗಗಳಲ್ಲಿ ಒಂದೆಂದು ಪರಿಗಣಿಸಲಾದ 8,070 ಕೋಟಿ ರೂಪಾಯಿ ವೆಚ್ಚದ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು 2008-09ರಲ್ಲಿ ಮಂಜೂರು ಮಾಡಿ 2015 ರಲ್ಲಿ ನಿರ್ಮಾಣ ಪ್ರಾರಂಭವಾಯಿತು.

ಈ ಮಾರ್ಗದಲ್ಲಿ 45 ಸುರಂಗಗಳು, 55 ಪ್ರಮುಖ ಸೇತುವೆಗಳು ಮತ್ತು 87 ಸಣ್ಣ ಸೇತುವೆಗಳು ಸೇರಿವೆ. ಸೈರಾಂಗ್ ಬಳಿಯಿರುವ ಸೇತುವೆ ಸಂಖ್ಯೆ 144, ಕುತುಬ್ ಮಿನಾರ್‌ಗಿಂತ 114 ಮೀಟರ್ ಎತ್ತರವಾಗಿದೆ.

ಇದು ದೇಶದ ಅತಿ ಎತ್ತರದ ಪಿಯರ್ ರೈಲ್ವೆ ಸೇತುವೆಯಾಗಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮಾರ್ಗವು ಬೈರಾಬಿ ಹೊರತುಪಡಿಸಿ ಐದು ರಸ್ತೆ ಮೇಲ್ಸೇತುವೆಗಳು ಮತ್ತು ಆರು ಅಂಡರ್‌ಪಾಸ್‌ಗಳನ್ನು ಒಳಗೊಂಡಿದೆ, ಇದು ನಾಲ್ಕು ಪ್ರಮುಖ ನಿಲ್ದಾಣಗಳನ್ನು ಒಳಗೊಂಡಿದೆ - ಹೊರ್ಟೋಕಿ, ಕಾನ್‌ಪುಯಿ, ಮುವಾಲ್ಖಾಂಗ್ ಮತ್ತು ಸೈರಾಂಗ್ ಆಗಿವೆ.

ಮಿಜೋರಾಂ ಮತ್ತು ದೇಶದ ಉಳಿದ ಭಾಗಗಳ ನಡುವಿನ ನೇರ ರೈಲು ಸಂಪರ್ಕವು ಈ ಪ್ರದೇಶದ ಜನರಿಗೆ ಸುರಕ್ಷಿತ, ಪರಿಣಾಮಕಾರಿ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣ ಆಯ್ಕೆಗಳನ್ನು ನೀಡುತ್ತದೆ.

ಇದು ಆಹಾರ ಧಾನ್ಯಗಳು, ರಸಗೊಬ್ಬರಗಳು ಮತ್ತು ಇತರ ಅಗತ್ಯ ವಸ್ತುಗಳ ಸಕಾಲಿಕ ಮತ್ತು ವಿಶ್ವಾಸಾರ್ಹ ಪೂರೈಕೆಯನ್ನು ಖಚಿತಪಡಿಸುತ್ತದೆ, ಇದರಿಂದಾಗಿ ಒಟ್ಟಾರೆ ಸಾಗಣೆ ದಕ್ಷತೆ ಮತ್ತು ಪ್ರಾದೇಶಿಕ ಪ್ರವೇಶವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಹೊಸ ರೈಲು ಮಾರ್ಗವು ಪ್ರಯಾಣಿಕ ಮತ್ತು ಸರಕು ಸಾಗಣೆ ಸಂಪರ್ಕವನ್ನು ಸುಧಾರಿಸುತ್ತದೆ, ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ, ಪ್ರವಾಸೋದ್ಯಮ ಮತ್ತು ಉದ್ಯೋಗವನ್ನು ಹೆಚ್ಚಿಸುತ್ತದೆ ಮತ್ತು ಮಿಜೋರಾಂ ಸಾರ್ವಜನಿಕರ ದೀರ್ಘಕಾಲೀನ ಬೇಡಿಕೆಯನ್ನು ಪೂರೈಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿ ಮೂರು ಹೊಸ ಎಕ್ಸ್‌ಪ್ರೆಸ್ ರೈಲುಗಳಾದ - ಸೈರಾಂಗ್ (ಐಜ್ವಾಲ್)-ದೆಹಲಿ (ಆನಂದ್ ವಿಹಾರ್ ಟರ್ಮಿನಲ್) ರಾಜಧಾನಿ ಎಕ್ಸ್‌ಪ್ರೆಸ್, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಿದರು.

ರೈಲ್ವೆ, ರಸ್ತೆಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ವಿವಿಧ ವಲಯಗಳನ್ನು ಪೂರೈಸುವ ಬಹು ಯೋಜನೆಗಳಿಗೆ ಅವರು ಅಡಿಪಾಯ ಹಾಕಿದರು.

ಏನಿದರ ಅನುಕೂಲ

ಪ್ರಧಾನ ಮಂತ್ರಿಗಳ ಈಶಾನ್ಯ ಪ್ರದೇಶ ಅಭಿವೃದ್ಧಿ ಉಪಕ್ರಮ (PM-DevINE) ಯೋಜನೆಯಡಿಯಲ್ಲಿ 500 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 45 ಕಿ.ಮೀ. ಐಜ್ವಾಲ್ ಬೈಪಾಸ್ ರಸ್ತೆಯು ಐಜ್ವಾಲ್ ನಗರದ ದಟ್ಟಣೆಯನ್ನು ಕಡಿಮೆ ಮಾಡುತ್ತದೆ, ಲುಂಗ್ಲೈ, ಸಿಯಾಹಾ, ಲಾಂಗ್ಟ್ಲೈ, ಲೆಂಗ್ಪುಯಿ ವಿಮಾನ ನಿಲ್ದಾಣ ಮತ್ತು ಸೈರಾಂಗ್ ರೈಲು ನಿಲ್ದಾಣ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಈಶಾನ್ಯ ವಿಶೇಷ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಥೆನ್ಜಾಲ್-ಸಿಯಾಲ್ಸುಕ್ ರಸ್ತೆಯು ತೋಟಗಾರಿಕೆ ರೈತರು, ಡ್ರ್ಯಾಗನ್ ಹಣ್ಣು ಬೆಳೆಗಾರರು, ಭತ್ತದ ಬೆಳೆಗಾರರು ಮತ್ತು ಶುಂಠಿ ಸಂಸ್ಕರಣಾಗಾರಗಳಿಗೆ ಪ್ರಯೋಜನ ನೀಡುತ್ತದೆ ಮತ್ತು ಐಜ್ವಾಲ್ ಥೆನ್ಜಾಲ್ ಲುಂಗ್ಲೈ ಹೆದ್ದಾರಿಯೊಂದಿಗೆ ಸಂಪರ್ಕವನ್ನು ಬಲಪಡಿಸುತ್ತದೆ.

ಸೆರ್ಚಿಪ್ ಜಿಲ್ಲೆಯ NESIDS (ರಸ್ತೆಗಳು) ಅಡಿಯಲ್ಲಿ ಬರುವ ಖಾಂಕವ್ನ್–ರೊಂಗುರಾ ರಸ್ತೆಯು ಮಾರುಕಟ್ಟೆಗಳಿಗೆ ಉತ್ತಮ ಪ್ರವೇಶವನ್ನು ಒದಗಿಸುತ್ತದೆ ಮತ್ತು ವಿವಿಧ ತೋಟಗಾರಿಕಾ ರೈತರು ಮತ್ತು ಪ್ರದೇಶದ ಇತರ ಜನರಿಗೆ ಪ್ರಯೋಜನವನ್ನು ನೀಡುತ್ತದೆ, ಜೊತೆಗೆ ಯೋಜಿತ ಶುಂಠಿ ಸಂಸ್ಕರಣಾ ಘಟಕವನ್ನು ಬೆಂಬಲಿಸುತ್ತದೆ.

ಲಾಂಗ್ಟ್ಲೈ–ಸಿಯಾಹಾ ರಸ್ತೆಯಲ್ಲಿರುವ ಚಿಮ್ಟುಯಿಪುಯಿ ಸೇತುವೆ, ಕ್ರೀಡಾ ಅಭಿವೃದ್ಧಿಗಾಗಿ ಖೇಲೋ ಇಂಡಿಯಾ ಬಹುಪಯೋಗಿ ಒಳಾಂಗಣ ಸಭಾಂಗಣ ಮತ್ತು ಐಜ್ವಾಲ್‌ನ ಮುಲ್ಖಾಂಗ್‌ನಲ್ಲಿ ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.

ಪ್ರಧಾನ ಮಂತ್ರಿ ಜನ ವಿಕಾಸ್ ಕಾರ್ಯಕ್ರಮ್ (PMJVK) ಯೋಜನೆಯಡಿಯಲ್ಲಿ ಕವರ್ತಾದಲ್ಲಿ ವಸತಿ ಶಾಲೆ ಮತ್ತು ತ್ಲಾಂಗ್ನುವಾಮ್‌ನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಪ್ರಧಾನಿ ಉದ್ಘಾಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com