
ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ತನ್ನ ಕೆನ್ನಾಲಿಗೆ ಚಾಚಿದ್ದು, ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಆವರಿಸಿದೆ. ಸುತ್ತಮುತ್ತಲಿನವರಲ್ಲಿ ಆತಂಕ ಸೃಷ್ಟಿಯಾಗಿದೆ.
ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಸ್ಥಳದಲ್ಲಿ 15 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳನ್ನು ನಿಯೋಜಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Advertisement