Kerala: ಪತ್ರಕರ್ತ ಸಿದ್ದಿಕ್ ಕಪ್ಪನ್ ಸೇರಿ 10 ಮಂದಿ ವಿರುದ್ಧ ಕೇಸ್ ದಾಖಲು

ಶನಿವಾರ ಸಂಜೆ ಕೇರಳ ಹೈಕೋರ್ಟ್ ಜಂಕ್ಷನ್ ಬಳಿಯ ವಂಚಿ ಚೌಕದ ಬಳಿ ಮಾನವ ಹಕ್ಕುಗಳ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ವೆಲ್ಫೇರ್ ಪಾರ್ಟಿಯ ಕಾರ್ಯಕರ್ತರು ಭಾಗವಹಿಸಿದ್ದರು.
Siddique Kappan  Casual Images
ಪತ್ರಕರ್ತ ಸಿದ್ದಿಕ್ ಕಪ್ಪನ್ ಸಾಂದರ್ಭಿಕ ಚಿತ್ರ
Updated on

ಕೊಚ್ಚಿ: ಪತ್ರಕರ್ತ ರೆಜಾಝ್ ಎಂ. ಶೀಬಾ ಸೈದೀಕ್ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕರ ಚಲನವಲನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪತ್ರಕರ್ತ ಸಿದ್ದಿಕ್ ಕಪ್ಪನ್ ಸೇರಿದಂತೆ 10 ಮಂದಿ ವಿರುದ್ಧ ಭಾನುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ಸಂಜೆ ಕೇರಳ ಹೈಕೋರ್ಟ್ ಜಂಕ್ಷನ್ ಬಳಿಯ ವಂಚಿ ಚೌಕದ ಬಳಿ ಮಾನವ ಹಕ್ಕುಗಳ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ವೆಲ್ಫೇರ್ ಪಾರ್ಟಿಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ ಎಂದು ಆರೋಪಿಸಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA law) ಅಡಿಯಲ್ಲಿ ಕೇರಳದ ಮೂಲದ ಪತ್ರಕರ್ತ ಸೈದೀಕ್ ಅವರನ್ನು ನಾಗಪುರದಲ್ಲಿ ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ನಡೆದ ಪ್ರತಿಭಟನೆ ಸಂಬಂಧ ಪತ್ರಕರ್ತ ಸಿದ್ದಿಕ್ ಕಪ್ಪನ್ ಮತ್ತಿತರ 10 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು; ಎರಡು ವರ್ಷಗಳ ನಂತರ ಜೈಲಿನಿಂದ ಬಿಡುಗಡೆ

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com