ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ.
ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!
Updated on

ಶಿಮ್ಲಾ: ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ. ಕಳೆದ ರಾತ್ರಿ ಪ್ರಾರಂಭವಾದ ಭೀಕರ ಮಳೆಯು ವ್ಯಾಪಕ ನಾಶವನ್ನು ಉಂಟುಮಾಡಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿದ್ದು ನದಿಗಳು ಭೋರ್ಗರೆಯುವ ಪ್ರವಾಹಗಳಾಗಿ ಮಾರ್ಪಟ್ಟಿವೆ.

ಸಾವಿನ ಸಂಖ್ಯೆ ಗಣನೀಯವಾಗಿ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 25 ಸಾವುಗಳು ಸಂಭವಿಸಿದ್ದು 13 ಸಾವುಗಳನ್ನು ದೃಢಪಟ್ಟಿವೆ. ಆದರೆ 16 ವ್ಯಕ್ತಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಹಸ್ರಧಾರ ಮತ್ತು ಮಾಲ್ದೇವ್ತಾ ಪ್ರದೇಶಗಳು ದುರಂತಕ್ಕೀಡಾದ ಪ್ರದೇಶಗಳಾಗಿವೆ. ರಿಸ್ಪಾನಾ ಮತ್ತು ಬಿಂದಾಲ್‌ನಂತಹ ನದಿಗಳು ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿವೆ. ಮನೆಗಳನ್ನು ಅವಶೇಷಗಳಿಂದ ತುಂಬಿ ಹೋಗಿವೆ. ನೂರಾರು ಅಂಗಡಿಗಳು ಮತ್ತು ಹೋಟೆಲ್‌ಗಳು ಉಕ್ಕಿ ಹರಿಯುತ್ತಿರುವ ನೀರಿನಿಂದ ಕೊಚ್ಚಿಹೋಗಿವೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾಲ್ದೇವ್ತಾ ಮತ್ತು ಕೇಸರ್ವಾಲಾದಂತಹ ಪೀಡಿತ ಪ್ರದೇಶಗಳ ಭೂ ಪರಿಶೀಲನೆ ನಡೆಸಿದರು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ಪ್ರವಾಹದಿಂದಾಗಿ ಅಂಗಡಿಗಳು ಭಾರಿ ನಷ್ಟವನ್ನು ಅನುಭವಿಸಿದ್ದು, ಹಾನಿಯ ಸಂಪೂರ್ಣ ಪ್ರಮಾಣವನ್ನು ಇನ್ನೂ ನಿರ್ಣಯಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಬೆಂಬಲದೊಂದಿಗೆ ಜಿಲ್ಲಾಡಳಿತ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿವೆ.

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!
ಗುಜರಾತ್‌: ರಸ್ತೆ ಇಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಕುಟುಂಬ; ದಾರಿ ಮಧ್ಯೆ ಮಹಿಳೆ ಸಾವು!

ಈ ನಡುವೆ ರಾಜಧಾನಿ ಶಿಮ್ಲಾದಲ್ಲಿರುವ ಹಿಮ್‌ಲ್ಯಾಂಡ್ ಹೋಟೆಲ್ ಸಮೀಪ ಸಂಭವಿಸಿದ ಭೂಕುಸಿತದಿಂದಾಗಿ ಹಲವು ವಾಹನಗಳು ಹೂತು ಹೋಗಿವೆ. ಹಲವು ರಸ್ತೆಗಳು ಬಂದ್‌ ಆಗಿ ಶಾಲೆ–ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಯಿತು. ತಡರಾತ್ರಿ 1 ಗಂಟೆ ಸುಮಾರಿಗೆ ಭಾರಿ ಪ್ರಮಾಣದ ಮಳೆಯಯಾಯಿತು. ಮರಗಳು ಹಾಗೂ ಕಟ್ಟಡಗಳು ಬೀಳುವ ಕಿವಿಗಡಚ್ಚುವ ಶಬ್ದಗಳು ಕೇಳಿಸಿದವು. ಕೂಡಲೇ ನಾವು ನಮ್ಮ ವಾಹನಗಳೊಂದಿಗೆ ಅಲ್ಲಿಂದ ಬಂದೆವು’ ಎಂದು ಭೂಕುಸಿತ ಉಂಟಾಗುವ ವೇಳೆಯಲ್ಲಿ ಹೋಟೆಲ್‌ ಸಮೀಪ ಕಾರ್‌ ನಿಲ್ಲಿಸಿದ್ದ ಗೌತಮ್ ಹಾಗೂ ರಾಹುಲ್ ಶುಕ್ಲಾ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com