ಕೇರಳ: 14 ಪುರುಷರಿಂದ ಬಾಲಕನ ಮೇಲೆ 2 ವರ್ಷ ನಿರಂತರ ಲೈಂಗಿಕ ದೌರ್ಜನ್ಯ; ಒಂಬತ್ತು ಮಂದಿ ಬಂಧನ

ಮನೆಯಲ್ಲಿ ಬಾಲಕನೊಂದಿಗೆ ಇದ್ದ ವ್ಯಕ್ತಿಯನ್ನು ಆತನ ತಾಯಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ನೋಡುತ್ತಿದ್ದಂತೆ ವ್ಯಕ್ತಿ ಅಲ್ಲಿಂದ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Representative Image
ಸಾಂದರ್ಭಿಕ ಚಿತ್ರ
Updated on

ಕಾಸರಗೋಡು: LGBTQ ಸಮುದಾಯದ ಮೊಬೈಲ್ ಅಪ್ಲಿಕೇಶನ್‌ನಲ್ಲಿ 16 ವರ್ಷದ ಬಾಲಕನೊಂದಿಗೆ ಸ್ನೇಹ ಬೆಳೆಸಿದ ನಂತರ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಬಾಲಕನ ಮೇಲೆ ಎರಡು ವರ್ಷಗಳಿಂದ ಆತನ ಮನೆಯಲ್ಲಿ ಮತ್ತು ಕಣ್ಣೂರು ಮತ್ತು ಕೋಯಿಕ್ಕೋಡ್ ಜಿಲ್ಲೆ ಸೇರಿದಂತೆ ಇತರ ಸ್ಥಳಗಳಲ್ಲಿ 14 ವಿಭಿನ್ನ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಮನೆಯಲ್ಲಿ ಬಾಲಕನೊಂದಿಗೆ ಇದ್ದ ವ್ಯಕ್ತಿಯನ್ನು ಆತನ ತಾಯಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ನೋಡುತ್ತಿದ್ದಂತೆ ವ್ಯಕ್ತಿ ಅಲ್ಲಿಂದ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ತನ್ನ ಮಗನನ್ನು ವಿಚಾರಿಸಿದಾಗ, ಆತ ಘಟನೆಯ ಬಗ್ಗೆ ವಿವರಿಸಿದ್ದಾನೆ. ಆಕೆ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.

ಬಾಲಕ ನೀಡಿದ ಹೇಳಿಕೆಯ ಆಧಾರದ ಮೇಲೆ ಕಳೆದ ಎರಡು ದಿನಗಳಲ್ಲಿ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ 2012ರ ಅಡಿಯಲ್ಲಿ 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Representative Image
ಅಪ್ರಾಪ್ತ ವಿದ್ಯಾರ್ಥಿ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ; 40 ವರ್ಷದ ಶಿಕ್ಷಕಿ ಬಂಧನ

ಕಾಸರಗೋಡು ಜಿಲ್ಲೆಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದ ಎಂಟು ಪ್ರಕರಣಗಳ ತನಿಖೆ ನಡೆಸಲು ಡಿವೈಎಸ್ಪಿ ಮತ್ತು ನಾಲ್ವರು ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ವನ್ನು ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉಳಿದ ಆರು ಪ್ರಕರಣಗಳನ್ನು ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ವರ್ಗಾಯಿಸಲಾಗಿದ್ದು, ಅಲ್ಲಿಯೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಅವರು ಹೇಳಿದರು.

ಈ ಪ್ರಕರಣದಲ್ಲಿ 14 ಆರೋಪಿಗಳು 25 ರಿಂದ 51 ವರ್ಷ ವಯಸ್ಸಿನವರಾಗಿದ್ದು, ಅವರಲ್ಲಿ ಒಬ್ಬರು ರೈಲ್ವೆ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com