
ಗುವಾಹಟಿ: ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಆರೋಪದ ಮೇಲೆ ಅಸ್ಸಾಂ ಸಿವಿಲ್ ಸರ್ವೀಸ್ (ACS) ಅಧಿಕಾರಿಯೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಜಾಗೃತ ದಳದ ಅಧಿಕಾರಿಗಳ ತಂಡ ಅಧಿಕಾರಿ ನೂಪುರ್ ಬೋರಾ ಅವರ ಗುವಾಹಟಿ ನಿವಾಸದ ಮೇಲೂ ದಾಳಿ ನಡೆಸಿ ರೂ. 92 ಲಕ್ಷ ನಗದು ಮತ್ತು ಸುಮಾರು ರೂ. 1 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾರ್ಪೇಟಾದಲ್ಲಿರುವ ಆಕೆಯ ಬಾಡಿಗೆ ಮನೆಯಲ್ಲಿ ದಾಳಿ ನಡೆಸಿದಾಗ 10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.
2019 ರಲ್ಲಿ ಅಸ್ಸಾಂ ಸಿವಿಲ್ ಸೇವೆಗೆ ಸೇರಿದ ಗೋಲಾಘಾಟ್ ನಿವಾಸಿ ನೂಪುರ್ ಬೋರಾ ಪ್ರಸ್ತುತ ಕಮ್ರೂಪ್ ಜಿಲ್ಲೆಯ ಗೊರೊಮರಿಯಲ್ಲಿ ವೃತ್ತ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಭೂ ವಿವಾದಿತ ಸಮಸ್ಯೆಗಳಲ್ಲಿ ಭಾಗಿಯಾಗಿರುವ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಆಕೆಯ ಮೇಲೆ ನಿಗಾ ಇರಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಬಾರ್ಪೇಟಾದಲ್ಲಿನ ಕಂದಾಯ ವೃತ್ತದ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಆಕೆಯ ಸಹಾಯಕ ಲಾತ್ ಮಂಡಲ್ ಸೂರಜಿತ್ ದೇಕಾ ಅವರ ನಿವಾಸದ ಮೇಲೂ ದಾಳಿ ನಡದಿದೆ. ಬಾರ್ಪೇಟಾದಲ್ಲಿ ಸರ್ಕಲ್ ಆಫೀಸರ್ ಆಗಿ ನೇಮಕಗೊಂಡಾಗ ನೂಪುರ್ ಬೋರಾ ಅವರೊಂದಿಗೆ ಶಾಮೀಲಾಗಿ ಅನೇಕ ಭೂ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡ ಆರೋಪವಿದೆ.
Advertisement