'ಒಳನುಸುಳುಕೋರರಿಗೆ ಆದ್ಯತೆ ನೀಡುವ ರಾಜಕೀಯ ಕಾರ್ಯಸೂಚಿ': ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡುತ್ತಿರುವುದರಿಂದ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದೆ.
Senior BJP leader Anurag Thakur  Thakur
ಅನುರಾಗ್ ಠಾಕೂರ್
Updated on

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಮತಗಳ್ಳತನದ ಆರೋಪ ಮಾಡಿದ ಕೂಡಲೇ, ಆಡಳಿತಾರೂಢ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕ ಮತ್ತು ಅವರ ಪಕ್ಷಕ್ಕೆ ಭಾರತದ ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಇಲ್ಲ ಎಂದು ಆರೋಪಿಸಿದೆ.

ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವುದರಿಂದ ಬಿಜೆಪಿ ಅವರ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಹುಲ್ ಗಾಂಧಿಯವರು ತುಷ್ಟೀಕರಣ ರಾಜಕೀಯದಲ್ಲಿ ಮುಳುಗಿರುವ ಕಾಂಗ್ರೆಸ್ ದುರ್ಬಲಗೊಳ್ಳುವಿಕೆ ಮತ್ತು ಕುಸಿಯುತ್ತಿರುವ ರಾಜಕೀಯ ನೆಲೆಯಿಂದಾಗಿ ಭಾರತದ ಸಾಂವಿಧಾನಿಕ ಸಂಸ್ಥೆಗಳಾದ ಇಸಿಐ ಅನ್ನು ದುರ್ಬಲಗೊಳಿಸುವ ಕಾರ್ಯಸೂಚಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

'ಒಳನುಸುಳುಕೋರರಿಗೆ ಆದ್ಯತೆ ನೀಡುವ ರಾಜಕೀಯ ಕಾರ್ಯಸೂಚಿಯನ್ನು ರಾಹುಲ್ ಗಾಂಧಿ ಅನುಸರಿಸುತ್ತಿದ್ದಾರೆ. ಇದು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತದೆ' ಎಂದು ಅವರು ಹೇಳಿದರು.

'ಕಾಂಗ್ರೆಸ್‌ನ ಅಕ್ರಮ ಮತದಾರರನ್ನು ರಕ್ಷಿಸುವ ಕಾರ್ಯಸೂಚಿಗೆ ಅವಕಾಶ ನೀಡಿದರೆ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಿತಾಸಕ್ತಿಗಳಿಗೆ ಹೆಚ್ಚಿನ ಹಾನಿಯಾಗುತ್ತದೆ. ಬಿಹಾರ ಮತ್ತು ಇತರ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಸೋಲುವ ಭಯದಿಂದಾಗಿ ಕಾಂಗ್ರೆಸ್ ನಾಯಕರು ಸುಳ್ಳು ನಿರೂಪಣೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Senior BJP leader Anurag Thakur  Thakur
Online ನಲ್ಲಿ ಮತ ಅಳಿಸಲು ಸಾಧ್ಯವಿಲ್ಲ, ರಾಹುಲ್ ಗಾಂಧಿ ಮತಗಳ್ಳತನ ಆರೋಪ ಆಧಾರರಹಿತ: ಚುನಾವಣಾ ಆಯೋಗ

ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡ ಠಾಕೂರ್, ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ಎಂಎಸ್ ಗಿಲ್ ಮತ್ತು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಟಿಎನ್ ಶೇಷನ್ ಅವರಂತಹ ಮಾಜಿ ಸಿಇಸಿಗಳ ಸಂಬಂಧಗಳನ್ನು ರಾಹುಲ್ ಆರೋಪಗಳಿಗೆ ಪ್ರತಿಯಾಗಿ ಉಲ್ಲೇಖಿಸಿದರು.

'ಕಾಂಗ್ರೆಸ್ ಪಕ್ಷವು ಈ ಹಿಂದೆ ಮಾಜಿ ಸಿಇಸಿಗಳೊಂದಿಗೆ ಸಂಬಂಧ ಹೊಂದಿತ್ತು ಮತ್ತು ಚುನಾವಣಾ ಆಯೋಗದ ಯಾವುದೇ ಅಧಿಕಾರಿಯ ವಿರುದ್ಧ ಆರೋಪ ಮಾಡುವ ನೈತಿಕ ಹಕ್ಕನ್ನು ಹೊಂದಿಲ್ಲ. ರಾಹುಲ್ ಗಾಂಧಿಯವರ ಆರೋಪಗಳಲ್ಲಿ ಯಾವುದೇ ಹುರುಳಿದ್ದರೆ, ಈ ವಿಷಯವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು' ಎಂದು ಸವಾಲೆಸೆದರು.

ಮತ ಕಳ್ಳತನ ಸಂಬಂದ ಗುರುವಾರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಪ್ರಜಾಪ್ರಭುತ್ವವನ್ನು ನಾಳಪಡಿಸಿದವರನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

Senior BJP leader Anurag Thakur  Thakur
CEC 'ಮತ ಕಳ್ಳರ ರಕ್ಷಕ'; ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ; Video

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಆರೋಪಗಳನ್ನು ತಿರಸ್ಕರಿಸಿದ್ದು, ಅವುಗಳು 'ತಪ್ಪು' ಮತ್ತು 'ಆಧಾರರಹಿತ' ಎಂದು ಕರೆದಿದೆ.

'ರಾಹುಲ್ ಗಾಂಧಿಯವರು ಉಲ್ಲೇಖಿಸಿದ ಕರ್ನಾಟಕದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದ್ದು, ಆ ಗೆಲುವು ಕೂಡ ಮತ ಕಳ್ಳತನದ ಫಲಿತಾಂಶವೇ?. ಆನ್‌ಲೈನ್‌ನಲ್ಲಿ ಯಾವುದೇ ಮತವನ್ನು ಅಳಿಸಲು ಆಗುವುದಿಲ್ಲ ಮತ್ತು ಮತದಾರರ ಮಾತುಗಳನ್ನು ಕೇಳದೆ ಯಾರ ಮತವನ್ನೂ ಅಳಿಸುವುದಿಲ್ಲ ಅಥವಾ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಆದರೆ, ರಾಹುಲ್ ಗಾಂಧಿಗೆ ನಿಯಮಗಳ ಪ್ರಕಾರ ಏನೂ ಅರ್ಥವಾಗುವುದಿಲ್ಲ' ಎಂದು ಠಾಕೂರ್ ಟೀಕಿಸಿದ್ದಾರೆ.

Senior BJP leader Anurag Thakur  Thakur
ಮತ ಕಳ್ಳತನ ಬಯಲಿಗೆಳೆಯಲು ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ: ರಾಹುಲ್ ಗಾಂಧಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com