ಬಿಹಾರ ಆಯ್ತು, ಈಗ ದೇಶಾದ್ಯಂತ SIR: ಸೆಪ್ಟೆಂಬರ್ 30 ರೊಳಗೆ ಸನ್ನದ್ದರಾಗಿ; ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಮುಂದಿನ 10 ರಿಂದ 15 ದಿನಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಿದ್ಧರಾಗಿ ಎಂದು ಚುನಾವಣಾ ಆಯೋಗದ ಮುಖ್ಯಸ್ಥರು ಸೂಚಿಸಿದ್ದಾರೆ.
Casual Images
ಚುನಾವಣಾ ಆಯೋಗದ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಬಿಹಾರ ಆಯ್ತು, ಈಗ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (SIR) ಚುನಾವಣಾ ಆಯೋಗ ಕೈಗೊಳ್ಳುತ್ತಿದೆ. ಇದಕ್ಕಾಗಿ ಸೆ.30 ರೊಳಗೆ ಸಜ್ಜಾಗಿ ಎಂದು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ಆಯೋಗ ಅಕ್ಟೋಬರ್-ನವೆಂಬರ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯಲ್ಲಿ ನಡೆದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ (CEO) ಸಮ್ಮೇಳನದಲ್ಲಿ, ಮುಂದಿನ 10 ರಿಂದ 15 ದಿನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಿದ್ಧರಾಗಿ ಎಂದು ಚುನಾವಣಾ ಆಯೋಗದ ಮುಖ್ಯಸ್ಥರು ಸೂಚಿಸಿದ್ದಾರೆ.

ಆದರೆ ಹೆಚ್ಚಿನ ಸ್ಪಷ್ಟತೆಗಾಗಿ, ಸೆಪ್ಟೆಂಬರ್ 30 ರ ಗಡುವನ್ನು ನಿಗದಿಪಡಿಸಲಾಗಿದೆ. ಕಳೆದ SIR ನಂತರ ಪ್ರಕಟಿಸಲಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸಿಇಒಗಳಿಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ರಾಜ್ಯಗಳ ಸಿಇಒಗಳು ತಮ್ಮ ಕೊನೆಯ SIR ನಂತರ ಮತದಾರರ ಪಟ್ಟಿಯನ್ನು ಈಗಾಗಲೇ ತಮ್ಮ ವೆಬ್ ಸೈಟ್ ಗಳಲ್ಲಿ ಪ್ರಕಟಿಸಿದ್ದಾರೆ. ದೆಹಲಿ ಸಿಇಒ ಅವರ ವೆಬ್‌ಸೈಟ್ 2008 ರ ಮತದಾರರ ಪಟ್ಟಿಯನ್ನು ಹೊಂದಿದೆ. ಆಗ ರಾಷ್ಟ್ರ ರಾಜಧಾನಿಯಲ್ಲಿ ಕೊನೆಯ ತೀವ್ರ ಪರಿಷ್ಕರಣೆ ನಡೆದಿತ್ತು. ಉತ್ತರಾಖಂಡದಲ್ಲಿ 2006ರಲ್ಲಿ ಕೊನೆಯದಾಗಿ ಎಸ್‌ಐಆರ್‌ ನಡೆದಿದ್ದು, ಆ ವರ್ಷದ ಮತದಾರರ ಪಟ್ಟಿ ಈಗ ರಾಜ್ಯ ಸಿಇಒ ವೆಬ್‌ಸೈಟ್‌ನಲ್ಲಿದೆ. ಬಿಹಾರದ 2003 ರ ಮತದಾರರ ಪಟ್ಟಿಯನ್ನು ತೀವ್ರ ಪರಿಷ್ಕರಣೆಗಾಗಿ EC ಬಳಸುತ್ತಿದೆ.

Casual Images
ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ ಸಿದ್ಧತೆ ಆರಂಭ; ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್

ಹೆಚ್ಚಿನ ರಾಜ್ಯಗಳು 2002 ಮತ್ತು 2004 ರ ನಡುವೆ ಕೊನೆಯ SIR ಹೊಂದಿವೆ. ಬಿಹಾರದ ನಂತರ ಇಡೀ ದೇಶದಲ್ಲಿ SIR ನಡೆಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. 2026 ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com