
ಯವತ್ಮಾಲ್: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ 17 ವರ್ಷದ ವಿದ್ಯಾರ್ಥಿನಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಂ
ಗರ್ಭಪಾತ ಮಾಡಿಸುವ ವೇಳೆ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಂಬತ್ತು ತಿಂಗಳ ಕಾಲ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಶೋಷಿಸಿದ ಮತ್ತು ಗರ್ಭಿಣಿಯನ್ನಾಗಿಸಿದ್ದ 27 ವರ್ಷದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರ ದೂರಿನ ಪ್ರಕಾರ, ಟ್ಯೂಷನ್ ನೀಡಿದ್ದ ಆರೋಪಿ, ವಿದ್ಯಾರ್ಥಿನಿಯ ಸ್ನೇಹ ಬೆಳೆಸಿಕೊಂಡು ಕಳೆದ ಒಂಬತ್ತು ತಿಂಗಳಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ನಂತರ, ಆರೋಪಿ ಆಕೆಯನ್ನು ಪುಸಾದ್ ಪಟ್ಟಣಕ್ಕೆ ಕರೆದೊಯ್ದ, ಅಲ್ಲಿ ಗರ್ಭಪಾತಕ್ಕಾಗಿ ಮಾತ್ರೆ ನೀಡಿದ್ದಾನೆ. ನಂತರ ಆಕೆಯ ಸ್ಥಿತಿ ಹದಗೆಟ್ಟಿದ್ದು, ಸೋಮವಾರ ನಾಂದೇಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಬಾಲಕಿ ನಿಧನರಾದರು ಎಂದು ಅವರು ಹೇಳಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement