
ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ತಿಳಿಸಿದ್ದಾರೆ.
ಭವಿಷ್ಯದ ಪೀಳಿಗೆಯ ಕ್ಷಿಪಣಿಯನ್ನು 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಒಳಗೊಳ್ಳಲು ವಿನ್ಯಾಸಗೊಳಿಸಲಾಗಿದೆ. ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ವಿಶೇಷವಾಗಿ ವಿನ್ಯಾಸಗೊಳಿಸಲಾದ ರೈಲು ಆಧಾರಿತ ಮೊಬೈಲ್ ಲಾಂಚರ್‌ನಿಂದ ನಡೆಸಲಾದ ಈ ರೀತಿಯ ಮೊದಲ ಉಡಾವಣೆ ಇದಾಗಿದೆ.
ಇದು ರೈಲು ಜಾಲದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದ್ದು, ಬಳಕೆದಾರರಿಗೆ ದೇಶಾದ್ಯಂತ ಚಲನಶೀಲತೆಯನ್ನು ಹೊಂದಲು ಮತ್ತು ಕ್ಷೀಣ ಗೋಚರ ಪರಿಸ್ಥಿತಿಯಲ್ಲಿ ಕಡಿಮೆ ಪ್ರತಿಕ್ರಿಯೆ ಸಮಯದಲ್ಲಿ ಉಡಾವಣೆ ಮಾಡಲು ಅನುವು ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
Advertisement