
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತವರ ಅವರ ಕುಟುಂಬದ ಇತರ ಸದಸ್ಯರಿಗೆ ಭದ್ರತೆಯನ್ನು ಹೆಚ್ಚಿಸಬೇಕೆಂದು ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ನಸೀಮ್ ಖಾನ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಖಾನ್, ಕೇರಳ ಬಿಜೆಪಿ ವಕ್ತಾರ ಪ್ರಿಂಟೋ ಮಹಾದೇವನ್ ಅವರು ರಾಹುಲ್ ಗಾಂಧಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು "ಅತ್ಯಂತ ಗಂಭೀರ ಮತ್ತು ಆತಂಕಕಾರಿಯಾಗಿದೆ. ಮಹಾದೇವನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಜೀವಕ್ಕೆ ಗಂಭೀರ ಅಪಾಯವಿರುವ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ರಕ್ಷಣೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಾಮಾನ್ಯ ಜನರ ರಕ್ಷಣೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದು ಖಾನ್ ಹೇಳಿದ್ದಾರೆ.
Advertisement