ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ರೂ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ; ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು.
Kamal Hassan
ಕಮಲ್ ಹಾಸನ್online desk
Updated on

ನವದೆಹಲಿ: ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕಮಲ ಹಾಸನ್ ವಿರುದ್ಧ ತಮಿಳುನಾಡಿನಲ್ಲಿ ಸ್ವಪಕ್ಷದವರೇ ಆಕ್ರೋಶಗೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನಲ್ಲಿ ಎಂಎನ್ಎಂ ಪ್ರಮುಖ ರಾಜಕೀಯ ಪಕ್ಷವಾಗಿ ಹೊರಹೊಮ್ಮುತ್ತದೆ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ ಚುನಾವಣೆಗೆ ಸ್ಪರ್ಧೆಯಿಂದ ಹಿಂದೆ ಸರಿದಿದೆ.

ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು.

ಡಿಎಂಕೆ ಎದುರಾಳಿ ಎಂದೇ ಗುರುತಿಸಿಕೊಂಡಿದ್ದ ಕಮಲ್ ಹಾಸನ್ ಅವರು ಸ್ವತಃ ಡಿಎಂಕೆಯಿಂದ ಸೀಟು ಪಡೆದು ರಾಜ್ಯಸಭೆ ಪ್ರವೇಶಿಸಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು.

ಎಂಎನ್ ಎಂ ಚುನಾವಣೆಯಿಂದ ದೂರ ಉಳಿಯುವ ನಿರ್ಧಾರ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಅಸಮಾಧಾನಕ್ಕೆ ಕಾರಣವಾಗಿದ್ದು, ಸ್ವಪಕ್ಷೀಯರಿಂದಲೇ ಕಮಲ್ ಹಾಸನ್ ತೀವ್ರ ಪ್ರತಿರೋಧ ಎದುರಿಸುತ್ತಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಂದ ತಲಾ 50,000 ರೂಪಾಯಿ ಅರ್ಜಿ ಶುಲ್ಕವನ್ನ ‘ಮಕ್ಕಳ್ ನೀಧಿ ಮೈಯಂ’ ಪಕ್ಷ ಸಂಗ್ರಹಿಸಿತ್ತು, ಆದರೆ ಈಗ ಚುನಾವಣೆಯಿಂದಲೇ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದರಿಂದ ಕಮಲ್ ಹಾಸನ್ ವಿರುದ್ಧ ಅಸಮಾಧಾನ ಹೊರಹಾಕಿರುವ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ಹಣವನ್ನು ಮರಳಿ ನೀಡುವಂತೆ ಒತ್ತಾಯಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ತಲಾ 50,000 ರೂ.ಗಳನ್ನು ಪಕ್ಷಕ್ಕೆ ಪಾವತಿಸಿದ್ದರು. ಈಗ ಅಭ್ಯರ್ಥಿಗಳು ತಮ್ಮ ಹಣವನ್ನು ವಾಪಸ್ ಕೇಳಿರುವ ಬೇಡಿಕೆಗೆ ಪ್ರತಿಕ್ರಿಯಿಸಿರುವ ಪಕ್ಷದ ಪದಾಧಿಕಾರಿಗಳು, ಪಾವತಿಸಿದ ಮೊತ್ತವನ್ನು ‘ಪಕ್ಷಕ್ಕೆ ನೀಡಿದ ದೇಣಿಗೆ’ ಎಂದು ಪರಿಗಣಿಸಲಾಗುತ್ತದೆ ಮತ್ತು ಈ ಸಮಯದಲ್ಲಿ ಅದನ್ನು ಮರುಪಾವತಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದು ಇನ್ನಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

Kamal Hassan
ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ; ಕಾರಣ DMK!

ಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿರುವ ಎಂಎನ್ಎಂ, ತನಗೆ ನೀಡಲಾದ ಸೀಟುಗಳ ಸಂಖ್ಯೆ ಕಡಿಮೆ ಇರುವುದು ಮತ್ತು ಡಿಎಂಕೆಯ ಚಿಹ್ನೆಯಡಿ ಸ್ಪರ್ಧಿಸುವಂತೆ ಬಂದ ಸಲಹೆಯನ್ನು ಒಪ್ಪದ ಕಾರಣ ಏಪ್ರಿಲ್ 23ರ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿತ್ತು. ಈಗ ಸ್ವಪಾರ್ಟಿಯಲ್ಲೇ ಕಮಲ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com