Video: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನ ಜತೆ ಸ್ನೇಹ; ಹೋಟೆಲ್‌ಗೆ ಕರೆಸಿ ಅತ್ಯಾಚಾರ ಎಸಗಿದ ವಿವಾಹಿತ ಮಹಿಳೆಯ ಬಂಧನ!

ಛತ್ತೀಸ್‌ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Married Woman Lures Minor Boy To Hotel After Befriending Him on Social Media, Rapes Him; Arrested
ಬಂಧಿತ ಮಹಿಳೆ
Updated on

ಛತ್ತೀಸ್‌ಗಢ: ಸಾಮಾಜಿಕ ಮಾಧ್ಯಮದಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಸ್ನೇಹ ಬೆಳೆಸಿಕೊಂಡು, ಆತನನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿವಾಹಿತ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.

ಛತ್ತೀಸ್‌ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಮಹಿಳೆ 16 ವರ್ಷದ ಬಾಲಕನ ಮೇಲೆ ಭಾವನಾತ್ಮಕ ಒತ್ತಡ ಮತ್ತು ಬೆದರಿಕೆ ಹಾಕಿ ಹೋಟೆಲ್ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ.

Married Woman Lures Minor Boy To Hotel After Befriending Him on Social Media, Rapes Him; Arrested
ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ

ನಂತರ ಬಾಲಕ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಪೋಷಕರು ಕೊತ್ವಾಲಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ತ್ವರಿತವಾಗಿ ಕ್ರಮ ಕೈಗೊಂಡು, ಮಹಿಳೆಯನ್ನು ಬಂಧಿಸಿದ್ದಾರೆ.

ಆರೋಪಿ ಮಹಿಳೆ ಮತ್ತು ಸಂತ್ರಸ್ತ ಬಾಲಕ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಪರಿಚಯ ಮಾಡಿಕೊಂಡಿದ್ದು, ಈ ಪರಿಚಯ ಸ್ನೇಹಕ್ಕೆ ತಿರುಗಿದೆ. ಬಳಿಕ ಹೋಟೆಲ್ ನಲ್ಲಿ ಭೇಟಿಯಾಗಲು ನಿರ್ಧರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com