‘ನಿರ್ದಿಷ್ಟ ಸಮುದಾಯಗಳನ್ನ ಟಾರ್ಗೆಟ್ ಮಾಡಲಾಗಿದೆ’: SIR ಪ್ರಕ್ರಿಯೆಯಲ್ಲಿ 91 ಲಕ್ಷ ಹೆಸರು ಡಿಲೀಟ್ ಗೆ ಮಮತಾ ಬ್ಯಾನರ್ಜಿ ಆಕ್ರೋಶ

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಹಸ್ತಕ್ಷೇಪದ ನಂತರ, ಪರಿಶೀಲನೆಯಲ್ಲಿದ್ದ ಸುಮಾರು 60 ಲಕ್ಷ ಪ್ರಕರಣಗಳಲ್ಲಿ 32 ಲಕ್ಷ ಹೆಸರನ್ನು ಮತ್ತೆ ಸೇರಿಸಲಾಗಿದೆ ಎಂದು ಹೇಳಿದರು.
Mamata Banerjee
ಮಮತಾ ಬ್ಯಾನರ್ಜಿ
Updated on

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ, ಕೆಲವು ಸಮುದಾಯಗಳ ಮತದಾರರ ಹೆಸರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ನಾದಿಯಾ ಜಿಲ್ಲೆಯ ಚಕ್‌ದಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ (TMC) ಹೆಸರನ್ನು ಕಳೆದುಕೊಂಡ ಮತದಾರರಿಗೆ ತಮ್ಮ ಪಕ್ಷ ಬೆಂಬಲ ನೀಡಲಿದೆ ಎಂದು ಹೇಳಿದರು. ಚುನಾವಣಾ ಆಯೋಗದ ಮಾಹಿತಿಯನ್ನು ಉಲ್ಲೇಖಿಸಿ, ಪರಿಷ್ಕರಣೆ ಬಳಿಕ ಸುಮಾರು 91 ಲಕ್ಷ ಹೆಸರುಗಳು ಪಟ್ಟಿಯಿಂದ ಅಳಿಸಲಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಹಸ್ತಕ್ಷೇಪದ ನಂತರ, ಪರಿಶೀಲನೆಯಲ್ಲಿದ್ದ ಸುಮಾರು 60 ಲಕ್ಷ ಪ್ರಕರಣಗಳಲ್ಲಿ 32 ಲಕ್ಷ ಹೆಸರನ್ನು ಮತ್ತೆ ಸೇರಿಸಲಾಗಿದೆ ಎಂದು ಹೇಳಿದರು.

ಉದ್ದೇಶಿತವಾಗಿ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಅವರು, ಕೆಲವು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಅಧಿಕೃತ ದಾಖಲೆಗಳಿಂದ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಹೇಳಿದರು.

294 ಸ್ಥಾನಗಳ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com