ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ: ಪಾಪದ ವಿಶ್ವಗುರು.. ಸಂಘಿಗಳೇ.. ಇದನ್ನು ನೀವು ಹೇಗೆ ಜೀರ್ಣಿಸಿಕೊಳ್ಳುತ್ತೀರಿ? ಮೋದಿ ಕಿಚಾಯಿಸಿದ DMK

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಿ, ಎರಡು ವಾರಗಳ ದ್ವಿಪಕ್ಷೀಯ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ರಾಜತಿ ಸಲ್ಮಾ ಪ್ರತಿಕ್ರಿಯಿಸಿದ್ದಾರೆ.
ರಾಜತಿ ಸಲ್ಮಾ
ರಾಜತಿ ಸಲ್ಮಾ
Updated on

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವ ಕುರಿತು ಡಿಎಂಕೆ ರಾಜ್ಯಸಭಾ ಸಂಸದೆ ರಾಜತಿ ಸಲ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಅಮೆರಿಕ–ಇರಾನ್ ಯುದ್ಧ ಸ್ಥಗಿತಗೊಂಡು ಕದನ ವಿರಾಮ ಘೋಷಿಸಲಾಗಿದೆ. ಪಾಪದ ವಿಶ್ವಗುರು. ಸಂಘಿಗಳೇ... ಇದನ್ನು ನೀವು ಹೇಗೆ ಜೀರ್ಣಿಸಿಕೊಳ್ಳುತ್ತೀರಿ? ಎಂದು ಸಲ್ಮಾ ‘ಎಕ್ಸ್‌’ನಲ್ಲಿ ಪೋಸ್ಟ್ ನಲ್ಲಿ ಲೇವಡಿ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಿ, ಎರಡು ವಾರಗಳ ದ್ವಿಪಕ್ಷೀಯ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ರಾಜತಿ ಸಲ್ಮಾ ಪ್ರತಿಕ್ರಿಯಿಸಿದ್ದಾರೆ.

ಇರಾನ್ ಕೂಡ ಟ್ರಂಪ್ ಅವರ ಶಾಂತಿ ಪ್ರಸ್ತಾವನೆಯನ್ನು ಒಪ್ಪಿಕೊಂಡಿದ್ದು, ಹೊರ್ಮುಜ್ ಜಲಸಂಧಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲು ಸಮ್ಮತಿಸಿದೆ.

ರಾಜತಿ ಸಲ್ಮಾ
ಅಮೆರಿಕ-ಇರಾನ್ ನಡುವೆ ಸಂಧಾನ ಯಶಸ್ವಿ: ಏಪ್ರಿಲ್ 10ಕ್ಕೆ ಇಸ್ಲಾಮಾಬಾದ್ ನಲ್ಲಿ ಮಹತ್ವದ ಮಾತುಕತೆ; ಪಾಕಿಸ್ತಾನದಿಂದ ಅಧಿಕೃತ ಆಹ್ವಾನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com