'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಮಾಹಿತಿ

ಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
Asha Bhosle
ಆಶಾ ಭೋಸ್ಲೆ
Updated on

ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಭಾನುವಾರ ಮುಂಬೈನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಏಪ್ರಿಲ್ 11ರ ಶನಿವಾರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಾವಿಗೆ ಕಾರಣ ದೃಢಪಡಿಸಿದ ವೈದ್ಯರು

ಹಿರಿಯ ಗಾಯಕಿ ಬಹು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಮತ್ತು ಅಂಗಾಂಗ ವೈಫಲ್ಯದಿಂದಾಗಿ ನಿಧನರಾದರು ಎಂದು ವೈದ್ಯರಾದ ಪ್ರತೀತ್ ಸಮದಾನಿ ದೃಢಪಡಿಸಿದರು.

'ಆಶಾ ಭೋಸ್ಲೆ ಇಂದು ನಿಧನರಾದರು ಎಂಬುದು ದುಃಖಕರ ಸುದ್ದಿ. ಅವರು ಬಹು ವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು...' ಎಂದು ಅವರು ಹೇಳಿದರು.

ಅವರ ನಿಧನದ ಸುದ್ದಿಯನ್ನು ಮಹಾರಾಷ್ಟ್ರದ ಸಂಸ್ಕೃತಿ ಸಚಿವ ಆಶಿಶ್ ಶೇಲಾರ್ ಅವರು ಆಸ್ಪತ್ರೆಯ ಹೊರಗೆ ಪ್ರಕಟಿಸಿದರು. ಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಆಶಾ ಭೋಸ್ಲೆ ಅವರ ಪುತ್ರ ಆನಂದ್ ಭೋಸ್ಲೆ ಕೂಡ ಈ ಸುದ್ದಿಯನ್ನು ದೃಢಪಡಿಸಿದ್ದು, ಅಂತಿಮ ನಮನ ಸಲ್ಲಿಸುವ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. 'ನನ್ನ ತಾಯಿ ಆಶಾ ಭೋಸ್ಲೆ ಇಂದು ನಿಧನರಾದರು. ನಾಳೆ ಬೆಳಿಗ್ಗೆ 11 ಗಂಟೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ...' ಎಂದರು.

ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿಯನ್ನು ಅವರ ಮೊಮ್ಮಗಳು ಮತ್ತು ಗಾಯಕಿ ಝನೈ ಭೋಸ್ಲೆ ದೃಢಪಡಿಸಿದ್ದರು.

Asha Bhosle
ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ; ಗಣ್ಯರ ಕಂಬನಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com