10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ಯುಗಾಂತ್ಯ: ಕೊನೆಗೂ ರಾಜೀನಾಮೆ; ನಾಳೆ BJP ಮುಖ್ಯಮಂತ್ರಿ ಪ್ರಮಾಣ

ಇತ್ತೀಚಿಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಅವರು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Bihar’s longest-serving CM Nitish Kumar resigns, successor likely to be sworn in Wednesday
ನಿತೀಶ್ ಕುಮಾರ್
Updated on

ಪಾಟ್ನಾ: ಸುಮಾರು ಎರಡು ದಶಕಗಳ ಕಾಲ 10 ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರ ಯುಗಾಂತ್ಯವಾಗಿದೆ.

ಇತ್ತೀಚಿಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಅವರು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ಲೋಕ ಭವನಕ್ಕೆ ತೆರಳಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್(ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದಾದ ಸ್ವಲ್ಪ ಸಮಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು, ತಮ್ಮಿಂದ ಅಧಿಕಾರ ವಹಿಸಿಕೊಳ್ಳುವ ಹೊಸ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Bihar’s longest-serving CM Nitish Kumar resigns, successor likely to be sworn in Wednesday
ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಸಚಿವ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು; ಮುಂದಿನ ಮುಖ್ಯಮಂತ್ರಿ ಯಾರು?

ಬಿಜೆಪಿ ಬಿಹಾರದಲ್ಲಿ ಮುಂದಿನ ಸರ್ಕಾರವನ್ನು ರಚಿಸಲು ಸಜ್ಜಾಗಿದ್ದು, ಬಿಹಾರದ ಮುಂದಿನ ಮುಖ್ಯಮಂತ್ರಿ ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೆ ಉನ್ನತ ಹುದ್ದೆಗೆ ಬಿಜೆಪಿಯಿಂದ ಯಾರು ನೇಮಕಗೊಳ್ಳುತ್ತಾರೆ ಎಂಬುದರ ಬಗ್ಗೆ ಸಸ್ಪೆನ್ಸ್ ಕಾಯ್ದುಕೊಂಡಿದೆ.

ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ನಿತೀಶ್ ಕುಮಾರ್ ಯುಗಾಂತ್ಯ

ನಿತೀಶ್ ಕುಮಾರ್ ಅವರ ರಾಜೀನಾಮೆ ಬಿಹಾರದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ, ಏಕೆಂದರೆ ಅವರು ರಾಜ್ಯ ರಾಜಕೀಯದಿಂದ ರಾಷ್ಟ್ರ ರಾಜಕಾರಣ ಪ್ರವೇಶಿಸಿದ್ದಾರೆ.

ಇಂದು ಬೆಳಗ್ಗೆ ನಿತೀಶ್ ಕುಮಾರ್ ಅವರು ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಹಾಗೂ ಇತರ ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ತಮ್ಮ ಕೊನೆಯ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com