ತಮಿಳುನಾಡು ಚುನಾವಣೆ: TVK ಅಧಿಕಾರಕ್ಕೆ ಬಂದರೆ ರೈತರ ಬೆಳೆ ಸಾಲ ಮನ್ನಾ- ವಿಜಯ್ ಭರವಸೆ

ರಾಜ್ಯದಲ್ಲಿ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳನ್ನು (MSME) ಮುಚ್ಚಲಾಗಿದೆ ಎಂಬ ಆರೋಪದ ಬಗ್ಗೆ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
TVK President Vijay
TVK ಅಧ್ಯಕ್ಷ ವಿಜಯ್
Updated on

ತಿರುಪ್ಪೂರ್: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಹೊಸ ಪಕ್ಷ TVK ಅಧ್ಯಕ್ಷ ವಿಜಯ್ ರೈತರಿಗೆ ಬೆಳೆ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳನ್ನು (MSME) ಮುಚ್ಚಲಾಗಿದೆ ಎಂಬ ಆರೋಪದ ಬಗ್ಗೆ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ TVK ಪಕ್ಷ ಅಧಿಕಾರಕ್ಕೆ ಬಂದರೆ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದರು.

5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರಿಗೆ ಶೇ. 50 ರಷ್ಟು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇದಲ್ಲದೆ, ಭತ್ತಕ್ಕೆ ಪ್ರತಿ ಕ್ವಿಂಟಲ್‌ಗೆ 3,500 ರೂ. ಮತ್ತು ಕಬ್ಬಿಗೆ ಪ್ರತಿ ಟನ್‌ಗೆ 4,500 ರೂ. ನೀಡುವುದಾಗಿ ಅಶ್ವಾಸನೆ ನೀಡಿದ್ದಾರೆ. ಡಿಎಂಕೆ ಆಡಳಿತಾವಧಿಯಲ್ಲಿ ಅನೇಕ ಎಂಎಸ್‌ಎಂಇಗಳನ್ನು ಮುಚ್ಚಲ್ಪಟ್ಟಿವೆ ಎಂದು ಅವರು ಆರೋಪಿಸಿದ್ದಾರೆ.

TVK President Vijay
234 ಕ್ಷೇತ್ರಗಳಲ್ಲೂ DMK ಮೈತ್ರಿಕೂಟ ಗೆಲುವು; ಯಾರೇ ಬಂದರೂ ನಮಗೆ ಚಿಂತೆಯಿಲ್ಲ: ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಸ್ಟಾಲಿನ್ ಮಾತು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com