CBSE 10ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ; ಯಾವ ನಗರಕ್ಕೆ ಮೊದಲ ಸ್ಥಾನ?

ಈ ವರ್ಷ ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದ CBSE 10ನೇ ತರಗತಿ ಪರೀಕ್ಷೆಗೆ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
CBSE Class 10 exam results announced; pass percentage stands at 93.70 per cent
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE)ಯು ಬುಧವಾರ 2025 - 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಯ(ಸೆಷನ್ 1) ಫಲಿತಾಂಶ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ವರ್ಷ ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದ CBSE 10ನೇ ತರಗತಿ ಪರೀಕ್ಷೆಗೆ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷ ಒಟ್ಟಾರೆ ಶೇ. 93.70 ವಿದ್ಯಾರ್ಥಿಗಳ ಪಾಸ್ ಆಗಿದ್ದಾರೆ. ಇದು ಕಳೆದ ವರ್ಷದ ಶೇ 93.66 ಕ್ಕಿಂತ ಸ್ವಲ್ಪ ಸುಧಾರಣೆಯಾಗಿದೆ.

ಹುಡುಗಿಯರು, ಹುಡುಗರಿಗಿಂತ ಹೆಚ್ಚು ಅಂದರೆ ಶೇ 94.99 ರಷ್ಟು ಉತ್ತೀರ್ಣರಾಗಿದ್ದು, ಹುಡುಗರು ಶೇ 92.6 ರಷ್ಟು ಉತ್ತೀರ್ಣರಾಗಿದ್ದಾರೆ.

CBSE Class 10 exam results announced; pass percentage stands at 93.70 per cent
2nd PUC result ಪ್ರಕಟ: ಈ ಬಾರಿ ದಾಖಲೆಯ ಫಲಿತಾಂಶ; ಶೇ. 12 ರಷ್ಟು ಹೆಚ್ಚಳ; ದಿಶಾ ರಾಜ್ಯಕ್ಕೆ ಫಸ್ಟ್

"ಒಟ್ಟು 55,368 ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 22,157 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ" ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ತಿರುವನಂತಪುರಂ ಮತ್ತು ವಿಜಯವಾಡ ಶೇ. 99.79 ರಷ್ಟು ಉತ್ತೀರ್ಣತೆಯನ್ನು ದಾಖಲಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅಗ್ರಸ್ಥಾನದಲ್ಲಿವೆ. ಚೆನ್ನೈ ಶೇ.99.58 ರಷ್ಟು ಉತ್ತೀರ್ಣರಾಗಿದ್ದರೆ, ಬೆಂಗಳೂರು ಶೇ.98.91 ರಷ್ಟು ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ.

ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಶೇ.33 ರಷ್ಟು ಅಂಕಗಳನ್ನು ಪಡೆಯಬೇಕು. ಶೇ.33 ರಷ್ಟು ಅಂಕಗಳನ್ನು ಗಳಿಸದವರಿಗೆ ಕಂಪಾರ್ಟ್‌ಮೆಂಟ್ ಪರೀಕ್ಷೆಯಲ್ಲಿ ಮತ್ತೊಂದು ಅವಕಾಶ ನೀಡಲಾಗುವುದು.

ಕಳೆದ ವರ್ಷಕ್ಕಿಂತ ಸ್ವಲ್ಪ ಸುಧಾರಣೆಯಾಗಿ ಈ ವರ್ಷ 1.47 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು 'ಕಂಪಾರ್ಟ್‌ಮೆಂಟ್' ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್‌ಗಳಾದ cbse.gov.in ಮತ್ತು results.cbse.nic.in ನಲ್ಲಿ ಪಡೆಯಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com