

ಸತ್ನಾ: ಮಧ್ಯಪ್ರದೇಶದ ಸತ್ನಾದಲ್ಲಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಿಗಿದ ಆರೋಪದ ಮೇಲೆ ಬಿಜೆಪಿ ಕೌನ್ಸಿಲರ್ ಮಗನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಮಧ್ಯಪ್ರದೇಶದ ಸತ್ನಾದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಮಗನ ವಿರುದ್ಧ ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ 27 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಬುಧವಾರ ಸಂಜೆ ಎಫ್‌ಐಆರ್ ದಾಖಲಿಸಲಾಗಿದ್ದು, ಬಳಿಕ ಕೌನ್ಸಿಲರ್ ಅವರ ಮನೆ ಮೇಲೆ ಪೊಲೀಸ್ ತಂಡ ದಾಳಿ ನಡೆಸಿತು. ಆದರೆ ಆರೋಪಿ ಪರಾರಿಯಾಗಿದ್ದಾನೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.
ಜಬಲ್ಪುರದ ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಮಹಿಳೆ, ಹಲವಾರು ವರ್ಷಗಳಿಂದ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದರು ಎಂದು ಪರಿಹಾರ್ ಅವರು ತಿಳಿಸಿದ್ದಾರೆ.
ಆರೋಪಿಯು ಮದುವೆಯ ನೆಪದಲ್ಲಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿಯು ಈಗ ಏಪ್ರಿಲ್ 20 ರಂದು ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಲು ನಿರ್ಧರಿಸಿದ್ದು, ಏಪ್ರಿಲ್ 16 ರಂದು ಅವರ 'ತಿಲಕ್' ಸಮಾರಂಭವನ್ನು ಯೋಜಿಸಲಾಗಿದೆ ಎಂದು ದೂರುದಾರ ಮಹಿಳೆ ಹೇಳಿದ್ದಾರೆ.
ಆರೋಪಿಯ ತಾಯಿ ಬಿಜೆಪಿ ಕೌನ್ಸಿಲರ್ ಆಗಿದ್ದು, ಅವರು ಬಿಜೆಪಿಗೆ ಸೇರುವ ಮೊದಲು ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.
Advertisement