Parliament special session: ಕ್ಷೇತ್ರ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!

ಪ್ರಮುಖ ಮಸೂದೆಗಳ ಕುರಿತು ಸದನವು 15 ಗಂಟೆಗಳ ಕಾಲ ಚರ್ಚೆ ಮಾಡಲು ಸಮಯದ ನಿಗದಿ ಮಾಡಲಾಗಿದೆ. ಸದಸ್ಯರು ಹೆಚ್ಚಿನ ಸಮಯಕ್ಕೆ ಬೇಡಿಕೆ ಇಟ್ಟರೆ ಅದನ್ನು 18 ಗಂಟೆಗಳವರೆಗೆ ಸ್ಪೀಕರ್ ಅವರು ವಿಸ್ತರಿಸುವ ಸಾಧ್ಯತೆಯಿದೆ.
Lok Sabha proceedings underway as part of the three-day special session of Parliament, Thursday, April 16, 2026.
ಲೋಕಸಭೆ
Updated on

ನವದೆಹಲಿ: ಸಂಸತ್ ವಿಶೇಷ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಸೇರಿ ಮೂರು ಮಸೂದೆಗಳನ್ನು ಮಂಡಿಸಿದ್ದು, ಅವುಗಳ ಚರ್ಚೆಗೆ 15 ಗಂಟೆ ಸಮಯ ನಿಗದಿ ಮಾಡಿದೆ. ಶುಕ್ರವಾರ ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ಪ್ರಮುಖ ಮಸೂದೆಗಳ ಕುರಿತು ಸದನವು 15 ಗಂಟೆಗಳ ಕಾಲ ಚರ್ಚೆ ಮಾಡಲು ಸಮಯದ ನಿಗದಿ ಮಾಡಲಾಗಿದೆ. ಸದಸ್ಯರು ಹೆಚ್ಚಿನ ಸಮಯಕ್ಕೆ ಬೇಡಿಕೆ ಇಟ್ಟರೆ ಅದನ್ನು 18 ಗಂಟೆಗಳವರೆಗೆ ಸ್ಪೀಕರ್ ಅವರು ವಿಸ್ತರಿಸುವ ಸಾಧ್ಯತೆಯಿದೆ. ಮಧ್ಯರಾತ್ರಿಯವರೆಗೂ ಸಂಸತ್ ನಡೆಯಲಿದೆ. ನಾಳೆ ಸಂಜೆ 4 ಗಂಟೆಗೆ ಮಸೂದೆಗಳ ಅಂಗೀಕಾರಕ್ಕೆ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.

ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಜಾರಿಗೆ ತರುವ ಮಸೂದೆ, ಕ್ಷೇತ್ರ ಪುರ್ನವಿಂಗಡೆ ಪ್ರಕ್ರಿಯೆ ಕಾಯ್ದೆ ಸೇರಿ ಮೂರು ಮಸೂದೆಗಳನ್ನು ಮಂಡಿಸಿದ್ದು, 131ನೇ ಸಾಂವಿಧಾನಿಕ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಆಯೋಗವನ್ನು ಸ್ಥಾಪಿಸುವ ಬಗ್ಗೆ ಇರುವ ಮೂರು ಮಸೂದೆಗಳ ಮೇಲೆ ಶುಕ್ರವಾರ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಮತದಾನ ನಡೆಯಲಿದೆ ಎಂದು ಸ್ಪೀಕರ್ ಓಂ ಬಿರ್ಲಾ ಪ್ರಕಟಿಸಿದ್ದಾರೆ.

Lok Sabha proceedings underway as part of the three-day special session of Parliament, Thursday, April 16, 2026.
Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧ

ಇದಕ್ಕೂ ಮುನ್ನ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು, ಸಂವಿಧಾನ (131ನೇ ತಿದ್ದುಪಡಿ) ಮಸೂದೆ– 2026, ಕ್ಷೇತ್ರ ಮರುವಿಂಗಡಣೆ ಮಸೂದೆ–2026 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆ ವಿರೋಧ ಪಕ್ಷಗಳು ಸಂವಿಧಾನ ವಿರೋಧಿ ಕ್ರಮ ಎಂದು ತೀವ್ರ ಪ್ರತಿಭಟನೆ ನಡೆಸಿದವು.

ಲೋಕಸಭೆ ಸ್ಥಾನಗಳನ್ನು 543ರಿಂದ 850ಕ್ಕೆ ಹೆಚ್ಚಿಸುವ ಸಂವಿಧಾನದ 131ನೇ ತಿದ್ದುಪಡಿ ಮಸೂದೆ-2026 ಅನ್ನು ಮಂಡಿಸಲು ಲೋಕಸಭೆ ಅನುಮತಿ ನೀಡಿತು.

ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ವಿಪಕ್ಷಗಳು ಮತಗಳಿಗೆ ಹಾಕಲು ಒತ್ತಾಯಿಸಿದಾಗ 207 ಸಂಸದರು ಮಸೂದೆ ಪರ ಹಾಕಿದರೆ, 126 ಸದಸ್ಯರು ವಿರುದ್ಧವಾಗಿ ಹಾಕಿದ್ದಾರೆ. ಒಟ್ಟು 86 ಎನ್​ಡಿಎ ಸದಸ್ಯರು ಸದನದಲ್ಲಿ ಗೈರಾಗಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com