ಹಳೆಯ ಮಹಿಳಾ ಮಸೂದೆ ತನ್ನಿ, ಯಾರು ಮಹಿಳಾ ವಿರೋಧಿ ಎಂಬುದನ್ನು ನೋಡೋಣ: ಪ್ರಿಯಾಂಕಾ ಗಾಂಧಿ

ವಿಶೇಷ ಅಧಿವೇಶನದ ಅಂತಿಮ ದಿನವಾದ ಇದು ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕರಿಸಿದ್ದ ಮಸೂದೆಯನ್ನು ಮರಳಿ ತರುವಂತೆ ಸರ್ಕಾರಕ್ಕೆ ಸವಾಲು ಹಾಕಿದರು.
Priyanka Gandhi
ಪ್ರಿಯಾಂಕಾ ಗಾಂಧಿ
Updated on

ನವದೆಹಲಿ: ವಿಶೇಷ ಸಂಸತ್ ಅಧಿವೇಶನದಲ್ಲಿ ಸಂವಿಧಾನ (131 ನೇ ತಿದ್ದುಪಡಿ) ಮಸೂದೆ 2026 ಲೋಕಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ವಿಫಲವಾದ ಬೆನ್ನಲ್ಲೇ, ಮೂಲ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೆ ಮಂಡಿಸುವಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಶೇಷ ಅಧಿವೇಶನದ ಅಂತಿಮ ದಿನವಾದ ಇದು ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕರಿಸಿದ್ದ ಮಸೂದೆಯನ್ನು ಮರಳಿ ತರುವಂತೆ ಸರ್ಕಾರಕ್ಕೆ ಸವಾಲು ಹಾಕಿದರು.

ಎಲ್ಲಾ ಪಕ್ಷಗಳಿಂದ ಅಂಗೀಕರಿಸಲ್ಪಟ್ಟ ಹಳೆಯ ಮಹಿಳಾ ಮಸೂದೆಯನ್ನು ಸೋಮವಾರವೇ ಕೇಂದ್ರ ಸರ್ಕಾರ ಮಂಡಿಸಬೇಕು. ಸೋಮವಾರ ಸಂಸತ್ ಅಧಿವೇಶನ ನಡೆಸಿ ಹಳೆಯ ಮಸೂದೆಯನ್ನು ತನ್ನಿ ಯಾರು ಮಹಿಳಾ ವಿರೋಧಿ ಎಂಬುದನ್ನು ನೋಡೋಣ. ನಾವೆಲ್ಲರೂ ಮತ ಚಲಾಯಿಸುತ್ತೇವೆ ಮತ್ತು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

Priyanka Gandhi
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

ಮಹಿಳಾ ಮೀಸಲಾತಿಯ ಅನುಷ್ಠಾನಕ್ಕೆ ಸಂಬಂಧಿಸಿದ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬಳಿಕ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ನಡೆಯುತ್ತಿರುವಂತೆಯೇ ಪ್ರಿಯಾಂಕಾ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಮಹಿಳಾ ಮೀಸಲಾತಿಗೆ ಲೋಕಸಭೆಯಲ್ಲಿ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ, 298 ಸದಸ್ಯರು ಪರವಾಗಿ ಮತ್ತು 230 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com