ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 18 ಸಾವು, ಹಲವರಿಗೆ ಗಾಯ; ಸಿಎಂ ಸ್ಟಾಲಿನ್ ಸಂತಾಪ!

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟವು ದೊಡ್ಡ ಅಪಘಾತಕ್ಕೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ.
firecracker factory Blast
ಸಂಗ್ರಹ ಚಿತ್ರTNIE
Updated on

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟವು ದೊಡ್ಡ ಅಪಘಾತಕ್ಕೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಾಗಿದೆ.

ಕತ್ತನಾರಪಟ್ಟಿ ಪ್ರದೇಶದಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ಕು ಘಟಕಗಳಿಗೂ ಕ್ಷಣಾರ್ಧದಲ್ಲಿ ಆವರಿಸಿಕೊಂಡಿವೆ. ಅಪಘಾತವು ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದ್ದು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು. ಸ್ಫೋಟವು ಎಷ್ಟು ತೀವ್ರವಾಗಿತ್ತೆಂದರೆ ಹತ್ತಿರದ ಕಟ್ಟಡಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ಇಲಾಖೆ, ಪೊಲೀಸರು ಮತ್ತು ರಕ್ಷಣಾ ತಂಡಗಳು ಅವಶೇಷಗಳನ್ನು ತೆರವುಗೊಳಿ ಜನರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ. ಆಡಳಿತವು ಇಡೀ ಪ್ರದೇಶವನ್ನು ಸುತ್ತುವರೆದಿದೆ. ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ.

firecracker factory Blast
ನೋಯ್ಡಾ ಹಿಂಸಾಚಾರ: ತಮಿಳುನಾಡಿನಲ್ಲಿ ಮಾಸ್ಟರ್ ಮೈಂಡ್ ಆದಿತ್ಯ ಆನಂದ್ ಬಂಧನ!

ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಪಟಾಕಿ ತಯಾರಿಕೆಯ ಸಮಯದಲ್ಲಿ ಸುರಕ್ಷತಾ ಮಾನದಂಡಗಳನ್ನು ನಿರ್ಲಕ್ಷಿಸುವುದರಿಂದ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ವೇಗವಾಗಿ ನಡೆಯುತ್ತಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಆಡಳಿತ ಹೇಳಿದೆ.

ವಿರುಧುನಗರ ಜಿಲ್ಲೆಯ ಕಟ್ಟನಪಟ್ಟಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಅನೇಕ ಜನರು ಸಾವನ್ನಪ್ಪಿದ ದುರಂತ ಸುದ್ದಿ ಅತ್ಯಂತ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗೌರವಾನ್ವಿತ ಸಚಿವರಾದ ಕೆ.ಕೆ. ಎಸ್.ಎಸ್.ಆರ್. ರಾಮಚಂದ್ರನ್ ಮತ್ತು ತಂಗಮ್ ತೆನ್ನರಸು ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು, ಅವರನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ತಕ್ಷಣ ಸ್ಥಳಕ್ಕೆ ಧಾವಿಸಬೇಕು ಎಂದು ನಾನು ವಿನಂತಿಸಿದ್ದೇನೆ. ಘಟನೆಯ ಬಗ್ಗೆ ತಿಳಿದ ತಕ್ಷಣ ನಾನು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು ಅಗತ್ಯವಿರುವ ಎಲ್ಲಾ ನೆರವನ್ನು ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com