ತಾಕತ್ತಿದ್ದರೆ ನೇರವಾಗಿ ಬನ್ನಿ, IT ದಾಳಿ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಬೇಡ: BJPಗೆ ಮಮತಾ ಬ್ಯಾನರ್ಜಿ ಸವಾಲು

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ನೆಲೆ ಬಲಪಡಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಇಂತಹ ದಾಳಿಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ. ಆದರೆ, “ನಾವು ಹೋರಾಟದಿಂದ ಬಂದವರು, ಇಂತಹ ಒತ್ತಡಗಳಿಗೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
Mamata Banerjee
ಮಮತಾ ಬ್ಯಾನರ್ಜಿ
Updated on

ಕೋಲ್ಕತಾ: ತಾಕತ್ತಿದ್ದರೆ ನನ್ನನ್ನು ನೇರವಾಗಿ ಎದುರಿಸಿ, ಆದಾಯ ತೆರಿಗೆ ಇಲಾಖೆ ದಾಳಿ ಮೂಲಕ ಭಯ ಹುಟ್ಟಿರುವ ಪ್ರಯತ್ನ ಮಾಡಬೇಡಿ ಎಂದು ಬಿಜೆಪಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಶನಿವಾರ ಸವಾಲು ಹಾಕಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವೆ ಟಿಎಂಸಿ ಅಭ್ಯರ್ಥಿ ನಿವಾಸ ಸೇರಿದಂತೆ ಕೋಲ್ಕತ್ತದ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಶ್ ಬೆಹಾರಿ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ದೇಬಾಶಿಶ್ ಕುಮಾರ್ ಮತ್ತು ಭವಾನಿಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದ ಮಿರಾಜ್ ಶಾ ಅವರ ಸ್ಥಳಗಳ ಮೇಲೂ ದಾಳಿ ನಡೆದಿದೆ.

ಇದೇ 23 ಮತ್ತು 29ರಂದು ಮತದಾನ ನಡೆಯುತ್ತಿದ್ದು, ಅದಕ್ಕೂ ಮುನ್ನವೇ ಐಟಿ ದಾಳಿ ನಡೆಸುವ ಮೂಲಕ ಪಕ್ಷವನ್ನು ಬೆದರಿಸುವ ಮತ್ತು ಅಭ್ಯರ್ಥಿಗಳಿಗೆ ಕಿರುಕುಳ ನೀಡುವ ಯತ್ನ ಇದಾಗಿದೆ ಎಂದು ಟಿಎಂಸಿ ಆರೋಪಿಸಿದೆ.

ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿಯವರು, ಐಟಿ ಇಲಾಖೆ ನಡೆಸಿದ ದಾಳಿಗಳು ರಾಜಕೀಯ ಪ್ರೇರಿತವಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಬೆದರಿಸಲು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Mamata Banerjee
ಬಿಜೆಪಿ ಅಧಿಕಾರಕ್ಕೆ ಬಂದರೆ ಮೊಟ್ಟೆ, ಮೀನು, ಮಾಂಸ ತಿನ್ನಲು ಬಿಡಲ್ಲ: ಮಮತಾ ಬ್ಯಾನರ್ಜಿ

ಇದು ಕಾನೂನು ಜಾರಿಗೆ ಸಂಬಂಧಿಸಿದ ಕ್ರಮವಲ್ಲ, ರಾಜಕೀಯ ದೌರ್ಜನ್ಯ. ಜನರ ಬೆಂಬಲ ಇರುವ ನಮ್ಮಂತಹ ನಾಯಕರನ್ನು ಇಂತಹ ಕ್ರಮಗಳಿಂದ ಕುಗ್ಗಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕೇಂದ್ರದ ಸಂಸ್ಥೆಗಳು ಸ್ವಾಯತ್ತತೆಯನ್ನು ಕಳೆದುಕೊಂಡಿವೆ ಎಂದು ಆರೋಪಿಸಿದರು.

ಸಮಸ್ಯೆಗಳ ಬಗ್ಗೆ ಮಾತನಾಡಲು ಆಗದವರು ಇಂತಹ ದಾಳಿಗಳ ಮೂಲಕ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆಂದು ಕಿಡಿಕಾರಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ನೆಲೆ ಬಲಪಡಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಇಂತಹ ದಾಳಿಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ. ಆದರೆ, “ನಾವು ಹೋರಾಟದಿಂದ ಬಂದವರು, ಇಂತಹ ಒತ್ತಡಗಳಿಗೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com