ಮುಂಬೈ: ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Sharad Pawar discharged from hospital
ಶರದ್ ಪವಾರ್
Updated on

ಮುಂಬೈ: ಮತ್ತೆ ಆರೋಗ್ಯದ ಸಮಸ್ಯೆಯಿಂದ ಇದೇ ತಿಂಗಳ 19ರಂದು ಇಲ್ಲಿನ ಬ್ರೀಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಶರದ್ಚಂದ್ರ ಪವಾರ್ ಅಧ್ಯಕ್ಷ ಶರದ್ ಪವಾರ್ ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಆತಂಕಪಡಬೇಕಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

Sharad Pawar discharged from hospital
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್‌ಗಿಂತ ಸುನೇತ್ರಾ ಪವಾರ್ ಶ್ರೀಮಂತೆ; ಕುಟುಂಬದಲ್ಲಿಯೇ ಸುಪ್ರಿಯಾ ಸುಳೆ ಆಸ್ತಿ ಅಧಿಕ!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ದಿವಂಗತ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಅಭ್ಯರ್ಥಿಯಾಗಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಬಾರಾಮತಿಗೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ ಎಂದು ಪವಾರ್ ಟ್ವೀಟ್ ಮಾಡಿದ್ದರು.

ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾದ ಕಾರಣ ಉಪಚುನಾವಣೆ ಅನಿವಾರ್ಯವಾಯಿತು. ಸುನೇತ್ರಾ ಪವಾರ್ ಅವರಿಗೆ ಮತ ಚಲಾಯಿಸುವಂತೆ ಜನರಿಗೆ ಆಸ್ಪತ್ರೆಯಿಂದಲೇ ಶರದ್ ಪವಾರ್ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com