

ಕೊಲ್ಕೋತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ದಾಖಲೆಯ ಮತದಾರರು ಭಾಗವಹಿಸಿರುವುದು ಕಂಡುಬಂದಿದ್ದು, ಇದು ರಾಜಕೀಯ ಬದಲಾವಣೆಯ ಪ್ರಬಲ ಸಂಕೇತ ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ,
ಕೋಲ್ಕತ್ತಾದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಬಂಗಾಳದಲ್ಲಿ ಜನಿಸಿದ, ಬಂಗಾಳಿ ಮಾತನಾಡುವ ನಾಯಕರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು. ಮೊದಲ ಹಂತದಲ್ಲಿ ಚುನಾವಣೆ ನಡೆದ 152 ಸ್ಥಾನಗಳಲ್ಲಿ ಪಕ್ಷವು 110 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದರು.
ಆಡಳಿತಾರೂಢ ಟಿಎಂಸಿ ನಿರ್ಗಮನ ಸನ್ನಿಹಿತವಾಗಿದೆ, ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಮಿತ್ ಶಾ ಅವರು ಭಾರತದ ಚುನಾವಣಾ ಆಯೋಗ ಮತ್ತು ಭದ್ರತಾ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು, ಈ ಹಂತದಲ್ಲಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಹೇಳಿದರು.
ಹಿಂದಿನ ಚುನಾವಣೆಗಳ ಹಿಂಸಾಚಾರದ ಅಂಕಿ ಅಂಶಗಳ ಮಾಹಿತಿ ನೀಡಿದರು, 2016 ರಲ್ಲಿ 1,200 ಕ್ಕೂ ಹೆಚ್ಚು ಜನರು ಮತ್ತು 2021 ರಲ್ಲಿ 1,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರೆ, ಇತ್ತೀಚಿನ ಹಂತದಲ್ಲಿ 30 ಕ್ಕಿಂತ ಕಡಿಮೆ ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.
ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಒಡಿಶಾಕ್ಕೆ ಅನುಗುಣವಾದ ಪ್ರಾಚೀನ ಪ್ರದೇಶಗಳನ್ನು ಉಲ್ಲೇಖಿಸಿದ ಅಮಿತ್ ಶಾ ಮೇ 5 ರ ನಂತರ "ಅಂಗಾ, ಬಂಗಾ ಮತ್ತು ಕಳಿಂಗ" ದಾದ್ಯಂತ ಸರ್ಕಾರಗಳನ್ನು ಹೊಂದುವ ನಿರೀಕ್ಷೆಯಿದೆ ಎಂದು ಶಾ ಹೇಳಿದರು.
2024 ರಲ್ಲಿ ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಅಸ್ಸಾಂನಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ, ಆದರೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ 15 ವರ್ಷಗಳ ಆಡಳಿತವನ್ನು ಉರುಳಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಬಿಜೆಪಿ ಸರ್ಕಾರವು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುತ್ತದೆ, "ಭೈಪೋ ತೆರಿಗೆ" ಮತ್ತು ಸಿಂಡಿಕೇಟ್ ರಾಜ್ ಅನ್ನು ರದ್ದುಗೊಳಿಸುತ್ತದೆ. ರಾಜ್ಯದಲ್ಲಿ ಹೂಡಿಕೆದಾರರಿಗೆ ಕೆಂಪು ಕಾರ್ಪೆಟ್ ಹಾಸುವ ಮೂಲಕ ವ್ಯಾಪಾರ ಸ್ನೇಹಿ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಶಾ ಹೇಳಿದರು.
Advertisement