

ನವದೆಹಲಿ : ವಾಣಿಜ್ಯ ಬಳಕೆಯ ಅಡುಗೆ ಅನಿಲ ಬಳಸುವವರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ಬೆಲೆಯನ್ನು 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಈಗಿನ ದರ ಇಳಿಕೆಯೊಂದಿಗೆ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಸತತ ಎರಡನೇ ತಿಂಗಳು ಇಳಿಕೆಯಾದಂತಾಗಿದೆ. ಜುಲೈ 1ರಂದು ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ 183.50ರಷ್ಟು ಕಡಿಮೆಯಾಗಿತ್ತು. ಆಗ ಸಿಲಿಂಡರ್ ಬೆಲೆ 2,930 ರೂಗೆ ಇಳಿಕೆಯಾಗಿತ್ತು.
ಕೋಲ್ಕತ್ತಾದಲ್ಲಿ (Kolkata) ಪ್ರತಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಇಳಿಕೆಯಾಗಿದ್ದು ಪ್ರತಿ ಸಿಲಿಂಡರ್ ಬೆಲೆ 2,872.50 ರೂ.ಗೆ ಇಳಿಕೆಯಾಗಿದೆ.
ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಮೇಲಿನ ಬೆಲೆ 202 ರೂ. ಇಳಿಕೆಯಾಗಿದ್ದು, 2,728 ರೂ.ಗೆ ಇಳಿದಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ (ರೀಟೇಲ್ ದರ) 2,930ರೂ. ರಷ್ಟಿದ್ದು, ಹೊಸ ದರಗಳು ಆಗಸ್ಟ್ 1 ರಿಂದ ಜಾರಿಗೆ ಬಂದಿವೆ.